ಕಲಬುರಗಿ : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಬಹುದಿನಗಳ ಬೇಡಿಕೆಯಾದ ವೇತನ ಪರಿಷ್ಕರಣೆ ಸಂಬಂಧ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಮಾತನಾಡಿದ್ದು, ಅವರು ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿನ ಸಾರಿಗೆ ವ್ಯವಸ್ಥೆ ಉತ್ತಮಪಡಿಸಲು ಎಲೆಕ್ಟ್ರಿಕ್ ಬಸ್ ಸೇರಿ ೧,೫೦೦ ಕ್ಕೂ ಹೆಚ್ಚು ಬಸ್ ಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.