ರಾಯಚೂರು: ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪಿಡಿಓ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ ಇಂದು ಹೈದರಾಬಾದ್-ಕರ್ನಾಟಕ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರೀಕ್ಷೆಯನ್ನು ನಿಗದಿಗೊಳಿಸಲಾಗಿತ್ತು. ಆದರೆ, ಪರೀಕ್ಷೆಗೂ ಮುನ್ನವೇ ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪ್ರಶ್ನೆ ಪತ್ರಿಕೆ ಬಂಡಲಿನಲ್ಲಿ 24 ಪ್ರಶ್ನೆ ಪತ್ರಿಕೆಗಳ ಬದಲಾಗಿ ಕೇವಲ 12 ಪ್ರಶ್ನೆ ಪತ್ರಿಕೆಗಳು ಮಾತ್ರ ಇದ್ದವು.
ಈ ಒಂದು ಘಟನೆಯಿಂದ ಆಯೋಗ ಯಾವ ರೀತಿ ಪರೀಕ್ಷೆಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂಬುದಕ್ಕೆ ಒಂದು ಸಣ್ಣ ನಿದರ್ಶನವಾಗಿದೆ. ಈ ಕೂಡಲೇ ಆಯೋಗವು ತನ್ನ ತಪ್ಪನ್ನು ಒಪ್ಪಿಕೊಂಡು ತಕ್ಷಣ ಪತ್ರಿಕಾ ಪ್ರಕಟಣೆ ಹೊರಡಿಸುವುದರ ಮೂಲಕ ಮರು ಪರೀಕ್ಷೆ ನಡೆಸಬೇಕು.
ಕೂಡಲೇ ಮರು ಪರೀಕ್ಷೆಗೆ ಸರ್ಕಾರ ಆದೇಶ ನೀಡಬೇಕೆಂದು ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳು ಆಗ್ರಹಿಸಿದ್ದು, ಕೆಪಿಎಸ್‌ಸಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…