ರಾಜ್ಯ

ಅರ್ಹತೆ ಇಲ್ಲದೇ ಬಿಪಿಎಲ್‌ ಕಾರ್ಡ್‌ ಪಡೆದವರಿಗೆ ದಂಡ: ಮುನಿಯಪ್ಪ

ಬೆಂಗಳೂರು: ಅರ್ಹತೆ ಇಲ್ಲದೇ ಬಿಪಿಎಲ್‌ ಕಾರ್ಡ್‌ ಬಳಕೆ ಮಾಡುತ್ತಿರುವವರು ದಂಡಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಆಹಾರ ಸಚಿವ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್ಹತೆ ಇಲ್ಲದವರು ಸಾಕಷ್ಟು ಜನ ಬಿಪಿಎಲ್‌ ಕಾರ್ಡ್‌ ಬಳಕೆ ಮಾಡುತ್ತಿದ್ದಾರೆ. ಕಾರ್ಡ್‌ ವಾಪಸ್‌ ಮಾಡಲು ಇನ್ನೊಂದು ವಾರದಲ್ಲಿ ಜಾಹಿರಾತು ಹೊರಡಿಸುತ್ತೇವೆ. ಮನವಿಯ ನಂತರವೂ ಕಾರ್ಡ್‌ ಬಳಕೆ ಮುಂದುವರಿದರೆ, ಕಾನೂನಿನಲ್ಲಿ ಅವಕಾಶವಿರುವ ದಂಡ ಪ್ರಯೋಗ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಡ್‌ ಪರಿಶೀಲನೆ ಮಾಡಲಾಗುತ್ತದೆ. ಈ ವೇಳೆ ಸಿಕ್ಕಿ ಹಾಕಿಕೊಂಡರೆ ದಂಡ ನೀಡಬೇಕಾಗುತ್ತದೆ ಎಂದಿದ್ದಾರೆ.

ಇದೇ ವೇಳೆ ಬಿಪಿಎಲ್‌ ಕಾರ್ಡ್‌ ಮಾನದಂಡಗಳನ್ನು ಪರಿಷ್ಕರಣೆ ಮಾಡೋ ಬಗ್ಗೆ ವಿಚಾರ ಮಾಡಿ ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ನಿರ್ಧಾರ ಮಾಡೋದಾಗಿ ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago