ರಾಜ್ಯ

ಪೆನ್‌ಡ್ರೈವ್‌ ಪ್ರಕರಣ: ವಕೀಲ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ

ಹಾಸನ/ಹೊಳೆನರಸೀಪುರ: ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ಪ್ರಿನ್ಸಿಪಲ್‌ ಸಿ.ಜೆ, ಜೆಎಂಎಫ್‌ಸಿ ನ್ಯಾಯಾಧೀಶರಾದ ಎಸ್‌. ಸಿದ್ದರಾಮ ಅವರು ಹೊಳೆ ನರಸೀಪುರದ ತಮ್ಮ ನಿವಾಸದಲ್ಲಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದ್ದಾರೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಹಿರಿಯೂರು ಬಳಿ ದೇವರಾಜೇಗೌಡನನ್ನು ಬಂಧಿಸಲಾಗಿತ್ತು. ದೇವರಾಜೇಗೌಡ ಮತ್ತೆರೆಡು ಆಡಿಯೋ ರಿಲೀಸ್‌ ಮಾಡಿದ ಎಂಟೇ ನಿಮಿಷದಲ್ಲಿ ಮೊಬೈಲ್‌ ಲೊಕೇಷನ್‌ ಮೂಲಕ ಆತನನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ನಿನ್ನೆ ರಾತ್ರಿ ಬಂಧಿಸಿ, ಇಂದು ಹೊಳೆನರಸೀಪುರಕ್ಕೆ ಕರೆತರಲಾಗಿದೆ.

ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿದ ನಂತರ ಜಡ್ಜ್‌ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.

ಇನ್ನು ಇವರ ಬಂಧನಕ್ಕೆ ಬಿಜೆಪಿ ಹಲವು ಮುಂಖಡರು ಆಕೋಶ ಹೊರಹಾಕಿದ್ದಾರೆ. ಬಂಧಿಸದೇ ಇದ್ದಲ್ಲಿ ಸರ್ಕಾರದ ವಿರುದ್ಧ ಹಲವು ವಿಚಾರಗಳು ಹೊರ ಬರುವುದನ್ನು ತಡೆಯಲು ಬಂಧಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

21 mins ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

23 mins ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

25 mins ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

27 mins ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

36 mins ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

42 mins ago