ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ-ದಿನೇ ರಾಜ್ಯ ರಾಜಕೀಯದಲ್ಲಿ ಹೊಸ-ಹೊಸ ವಿಷಯಗಳು ಹೊರಬುರುತ್ತಲೇ ಇವೆ.
ಇದೇ ಪ್ರಕರಣದಲ್ಲಿ ಬಂಧಿಯಾಗಿರುವ ವಕೀಲ ದೇವರಾಜೇಗೌಡರು ಡಿಸಿಎಂ ಡಿಕೆ ಶಿವಕುಮಾರ್ ಮೇಲೆ 100 ಕೋಟಿ ರೂ. ಆರೋಪ ಮಾಡಿದ ಬೆನ್ನಲ್ಲೇ ಜಾ.ದಳ ತಮ್ಮ ಟ್ವಿಟ್ಟರ್‌ನಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಕೆಂಡಕಾರಿದ್ದಾರೆ.
ದೇವರಾಜೇಗೌಡರ ಹೇಳಿಕೆ ಬೆನ್ನಲ್ಲೇ ಉಳಿದ ನಾಲ್ಕು ಜನರ ಹೆಸರನ್ನು ಜಾ.ದಳ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬಹಿರಂಗಗೊಳಿಸಿದೆ. ಇದೊಂದು ಸಿಡಿ ಶಿವಕುಮಾರ್ ಪೆನ್‌ಡ್ರೈವ್ ಗ್ಯಾಂಗ್ ಆಗಿದ್ದು, ೧. ಡಿಸಿಎಂ ಡಿಕೆ ಶಿವಕುಮಾರ್, ೨. ಕೃಷಿ ಸಚಿವ ಚೆಲುವರಾಯಸ್ವಾಮಿ, ೩. ಕಂದಾಯ ಸಚಿವ ಕೃಷ್ಣಭೈರೇಗೌಡ, ೪. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, + ಇನ್ನೂ ಒಬ್ಬ ಸಚಿವ, ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಎಂದು ಆರೋಪ ಮಾಡಿದ್ದಾರೆ.
ಮುಂದುವರೆದು ಇವರೆಲ್ಲರೂ ಹೊರಡಿಸಿರುವ ಸಂಚು ಏ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೆ ಕೆಟ್ಟ ಹೆಸರು ತರುವುದು. ಸಂಚು ಸಾಕಾರಗೊಳಿಸಲು ಸಿಡಿ ಶಿವಕುಮಾರ್ ಸಾಹೇಬ್ರು ವಕೀಲರಾ ದೇವರಾಜೇಗೌಡರಿಗೆ ನೀಡಿದ ಆಫ್ರ್ ಬರೋಬ್ಬರಿ 100 ಕೋಟಿ ಎಂದು ಬರೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ.
https://x.com/JanataDal_S/status/1791476656143814874
ದೇವರಾಜೇಗೌಡ ಆರೋಪವೇನು?
ಪೆನ್‌ಡ್ರೈವ್ ತಯಾರಿಸಿದ್ದು, ಡಿಕೆ ಶಿವಕುಮಾರ್ ಅವರು, ಇದನ್ನು ಹ್ಯಾಂಡಲ್ ಮಾಡಲು ನಾಲ್ಕು ಸಚಿವರ ಸಮಿತಿಯನ್ನು ರಚಿಸಿದರು. ಅಲ್ಲದೇ ಡಿಕಿ ಶಿವಕುಮಾರ್ ಪೆನ್‌ಡ್ರೈವ್ ಹಂಚಲು ಹೇಳಿದ್ದು ಎಚ್‌ಡಿ ಕುಮಾರಸ್ವಾಮಿ ಎಂದು ಹೇಳಲು ನನಗೆ 100ಕೋಟಿ ರೂ ಆಫರ್ ಮಾಡಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದರು.
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…