ಬೆಂಗಳೂರು : ರಾಜ್ಯದಲ್ಲಿ ಹಾಲಿನ ಬೆಲೆಯನ್ನು ಹೆಚ್ಚು ಮಾಡಿಲ್ಲ . ಅದರ ಪೊಟ್ಟಣದಲ್ಲಿ ಹೆಚ್ಚಿನ ಪ್ರಮಾಣದ ಹಾಲಿಗೆ ಗ್ರಾಹಕರು ಹಣ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾಗರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಹಾಲಿನ ಪೊಟ್ಟಣಗಳಲ್ಲಿ ಒದಗಿಸುತ್ತಿರುವ ಹೆಚ್ಚುವರಿ ಹಾಲಿಗೆ ಗ್ರಾಹಕರಿಂದ ಹಣ ಪಡೆಯಲಾಗುತ್ತಿದೆ. ಮತ್ತು ಆ ಹಣ ನೇರವಾಗಿ ರೈತರಿಗೆ ಹೋಗುತ್ತದೆ ಎಂದರು.
ಅಲ್ಲದೆ ಹಾಲು ಉತ್ಪಾದಕರಿಗೆ ೨ ರೂ ಇದ್ದ ಸಬ್ಸಿಡಿ ಯನ್ನ ೫ ರೂ ಗೆ ಹೆಚ್ಚಿಸಿದ್ದು ನಾನು, ಆರ್ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾಹಿತಿ ಇಲ್ಲದೆ ಹೇಳಿಕೆಗಳನ್ನು ನೀಡುತ್ತಾರೆ. ನಮ್ಮ ಸರ್ಕಾರ ರೈತರಿಗೆ ಪ್ರತಿದಿನ ರೂ 5 ಕೋಟಿ ಪ್ರೋತ್ಸಾ ಹ ಧನ ನೀಡುತ್ತಿದೆ ಅದು ತಿಂಗಳಿಗೆ ₹ 150 ಕೋಟಿ ಮತ್ತು ವರ್ಷಕ್ಕೆ ₹ 1800 ಕೋಟಿ ಆಗುತ್ತದೆ ಎಂದು ಹೇಳಿದರು. ಇದೇ ವೇಳೆ ಮಾಧ್ಯಮದವರು ಸರ್ಕಾರ ರೈತರ ಸಬ್ಸಿಡಿ ಬಾಕಿ ಉಳಿಸಿಕೊಂಡಿದೆಯಲ್ಲಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಅದು ನಾವು ಉಳಿಸಿಕೊಂಡಿರೋದು ಅಲ್ಲ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ₹700 ಕೋಟಿ ಬಾಕಿಯುಳಿಸಿಕೊಂಡಿತ್ತು ಅದನ್ನು ನಮ್ಮ ಸರ್ಕಾರ ಚುಕ್ತಾ ಮಾಡುತ್ತಿದೆ ಎಂದು ಹೇಳಿದರು
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…