ರಾಮನಗರ : ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.
ಇಲ್ಲಿ ಕಲ್ಲು ಹೊಡೆಕೊಂಡು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ.
ಅಂತವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದರೆ ಕಟ್ಟುತ್ತಾರೆಯೇ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಅವರು ಟಾಂಗ್ ನೀಡಿದರು.
ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು.
ಅವರನ್ನು ಒಪ್ಪಿಸಿ, ಮನವರಿಕೆ ಮಾಡಿಕೊಟ್ಟು ಹಣ ಪಡೆಯಬೇಕು. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದು ಸಂಸದ ಸುರೇಶ್ ಅವರಿಗೆ ತರಾಟೆಗೆ ತೆಗೆದುಕೊಂಡರು ಮಾಜಿ ಮುಖ್ಯಮಂತ್ರಿಗಳು.
ಶೋಷಿತರ ಹೆಸರಿನಲ್ಲಿ ಸಿಎಂ ಮಜಾ : ಶೋಷಿತ ವರ್ಗಗಳ ಜನರ ಬಗ್ಗೆ ಕಾಂಗ್ರೆಸ್ ಅನುಕಂಪದ ಲೇವಡಿ ಮಾಡಿದ ಕುಮಾರಸ್ವಾಮಿ ಅವರು; ಶೋಷಿತ ವರ್ಗಗಳ ಹೆಸರಿನಲ್ಲಿ ಇವರು ಮಜಾ ಮಾಡ್ತಾ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಶೋಷಿತ ವರ್ಗಗಳ ಜನ ಬೀದಿಯಲ್ಲಿ ಇದ್ದಾರೆ. ಎಷ್ಟು ಜನರನ್ನು ಇವರು ಮೀಸಲಾತಿ ವ್ಯವಸ್ಥೆಯಲ್ಲಿ ಉಳಿಸಿಕೊಂಡಿದ್ದಾರೆ. ಎಷ್ಟು ಜನರಿಗೆ ಅನುಕೂಲ ಆಗಿದೆ? ಮೀಸಲಾತಿ ಪಡೆದುಕೊಂಡವರೇ ಮತ್ತೆ ಮತ್ತೆ ಮೀಸಲು ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.
ಅದಕ್ಕೆ ಏನು ಹೇಳುತ್ತಾರೆ ಇವರು? ಮೀಸಲು ಸೌಲಭ್ಯ ಪಡೆದವರೇ ಎಷ್ಟು ವರ್ಷ ಪಡೆಯುತ್ತಾರೆ? ಅದನ್ನು ಜನರಿಗೆ ತಿಳಿಸಿ. ಶೋಷಿತ ವರ್ಗಗಳ ಬದುಕು ಕಾಂಗ್ರೆಸಿಗರಿಗೆ ಬೇಕಿಲ್ಲ.
ಸ್ವಾತಂತ್ರ್ಯ ಬಂದು 75 ವರ್ಷದಿಂದ ಇನ್ನೂ ಅವರ ಹೆಸರು ಹೇಳಿಕೊಂಡೇ ಜೀವನ ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ವಿರುದ್ದ ಹೆಚ್ ಡಿಕೆ ವಾಗ್ಧಾಳಿ ನಡೆಸಿದರು.
ಕಾಂತರಾಜು ವರದಿ ಬಗ್ಗೆ ಬೀದಿ ಬೀದಿಯಲ್ಲಿ ಮಾತನಾಡಿದ್ದಾರೆ. ನಿಮ್ಮನ್ನು ವರದಿ ಸ್ವೀಕರಿಸಬೇಡಿ ಅಂತ ಹಿಡಿದುಕೊಂಡಿರುವವರು ಯಾರು? ನಾನು ಸಿಎಂ ಆಗಿದ್ದಾಗ ವರದಿ ತೆಗೆದುಕೊಂಡಿಲ್ಲ ಅಂದಿದ್ದಾರೆ.
ಆ ವರದಿಯಲ್ಲಿ ಮೆಂಬರ್ ಸೆಕ್ರೆಟರಿ ಸಹಿ ಇತ್ತಾ? ಇವತ್ತಿನ ವರೆಗೂ ಆ ವರದಿಗೆ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನ ನಾನು ಹೇಗೆ ಸ್ವೀಕರಿಸಲಿ? ಸುಮ್ಮನೆ ನನ್ನ ಮೇಲೆ ಆರೋಪ ಮಾಡ್ತಾರೆ ಎಂದು ಅವರು ಕಿಡಿಕಾರಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…