People need not worry about heart attacks Sharan Prakash Patil
ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನರಿಗೆ ಅಭಯ ನೀಡಿದರು.
ಹೃದಯಾಘಾತ ಬಗ್ಗೆ ಜನರು ಆತಂಕ ಪಡಬೇಡಿ. ಮಾಧ್ಯಮದಲ್ಲಿ ಇದರ ಬಗ್ಗೆ ಹೆಚ್ಚು ವೈಭವೀಕರಿಸಲಾಗುತ್ತಿದೆ. ಜನರಿಗೆ ಭೀತಿ ಉಂಟಾಗುವುದು ಸಹಜ. ಆದರೆ ವೈದ್ಯರು ಹಾಗೂ ಇಲಾಖೆಯ ಅಧಿಕಾರಿಗಳು ನೀಡುವ ಸಲಹೆಗಳನ್ನು ಪಾಲಿಸಿ ಎಂದು ಸಚಿವರು ತಿಳಿಸಿದರು.
ಸಾರ್ವಜನಿಕರು ನಿಯಮಿತ ಆಹಾರ, ಪೌಷ್ಟಿಕಯುಕ್ತ ಆಹಾರ, ವ್ಯಾಯಾಮ ಹಾಗೂ ಯೋಗ ಹಾಗೂ ಇತರೆ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಿ. ಜೀವನ ಶೈಲಿಯನ್ನು ಆದಷ್ಟು ಬಳಸಿಕೊಳ್ಳಿ. ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿಯೇ ಇದೆ ಎಂದು ಮಾಹಿತಿ ನೀಡಿದರು.
ಆದಷ್ಟು ಜಂಕ್ ಫುಡ್, ದುರಭ್ಯಾಸಗಳನ್ನು ಮಾಡಬಾರದು. ಕರಿದ ಪದಾರ್ಥಗಳ ಸೇವನೆ ನಿಯಂತ್ರಣ ಮಾಡಿಕೊಳ್ಳುವ ಮೂಲಕ ಆರೋಗ್ಯ ಸಂರಕ್ಷಿಸಕೊಳ್ಳಬಹುದು. ಜನರು ಎಚ್ಚರದಿಂದಿರಿ, ಸುರಕ್ಷಿತವಾಗಿರಿ, ಆತಂಕದಿಂದ ದೂರವಿರಿ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸಲಹೆ ನೀಡಿದರು.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…