ರಾಜ್ಯ

ಸೂರ್ಯನ ಶಾಖದಿಂದ ತತ್ತರಿಸಿದ ರಾಜ್ಯದ ಜನತೆ: ಹೆಚ್ಚಿದ ಎಳನೀರು ಬೆಲೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಧಗೆ ಹೆಚ್ಚಾಗುತ್ತಿದ್ದು, ಸೂರ್ಯನ ಶಾಖಕ್ಕೆ ಜನರು ತತ್ತರಿಸಿ ಹೋಗಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸೂರ್ಯನ ಶಾಖ ಹೆಚ್ಚಾಗಿದ್ದು, ದಾಹ ತಣಿಸಿ ಕೊಳ್ಳಲು ಜನರು ತಂಪು ಪಾನಿಯಗಳತ್ತ ಮುಖ ಮಾಡಿದ್ದಾರೆ. ನೈಸರ್ಗಿಕ ಪಾನೀಯ ಎಳನೀರಿನ ಬೆಲೆ 60 ರೂ ತಲುಪಿದೆ. ಶಿವರಾತ್ರಿ ಕಳೆಯುತ್ತಿದ್ದಂತೆ ಬಿಸಿಲಿನ ತಾಪ ಏರುತ್ತಿದ್ದು, ಜನರು ಪ್ರಾರಂಭದ ಬಿಸಿಲಿಗೆ ಬಸವಳಿಯುತ್ತಿದ್ದಾರೆ. ಇನ್ನೂ ಎರಡು ತಿಂಗಳು ಬಿಸಿಲು ಇರಲಿದ್ದು ದಿನ ಕಳೆಯುವುದು ಹೇಗೆ ಎಂದು ಜನತೆ ಚಿಂತೆಗೀಡಾಗಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಜನರು ದಾಹ ತಣಿಸಿಕೊಳ್ಳಲು ತಂಪು ಪಾನೀಯಗಳತ್ತ ಮುಖ ಮಾಡಿದ್ದು ಬೇಡಿಕೆ ಹೆಚ್ಚಾದ ಹಿನ್ನಲೆಯಲ್ಲಿ ಬಿಸಿಲಿನಂತೆ ಬೆಲೆಯೂ ಸಹ ಅಷ್ಟೆ ಹೆಚ್ಚಾಗಿದೆ. ಕಳೆದ ಒಂದು ತಿಂಗಳ ಹಿಂದೆ ಬೆಂಗಳೂರಿನಲ್ಲಿ 30 ರೂಗೆ ಸಿಗುತ್ತಿದ್ದ ಎಳನೀರು ಈಗ ಬರೋಬ್ಬರಿ 60 ರೂ ತಲುಪಿದೆ. ಮಂಡ್ಯ, ಮದ್ದೂರು, ತುಮಕೂರು, ರಾಮನಗರ, ಮಾಗಡಿ ಸೇರಿದಂತೆ ಮತ್ತಿತರ ಕಡೆಯಿಂದ ಎಳನೀರು ಬರುತ್ತಿದೆ. ಆದರೆ ಬೇಡಿಕೆ ಹೆಚ್ಚಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಸಿಗುತ್ತಿಲ್ಲ.

ಇತ್ತೀಚೆಗೆ ಜನರಲ್ಲಿ ಆರೋಗ್ಯ ಕಾಳಜಿ ಹೆಚ್ಚಾಗುತ್ತಿದ್ದು, ಕೃತಕ ಪಾನೀಯಗಳಿಗಿಂತ ರಾಸಾಯನಿಕ ಮುಕ್ತ ಹಾಗೂ ಯಾವುದೇ ಕಲಬೆರಿಕೆ ಮಾಡಲು ಸಾಧ್ಯವಾಗದ ಉತ್ತಮ ಔಷಧಿ ಗುಣಗಳನ್ನು ಹೊಂದಿರುವ ದೇಹವನ್ನು ತಂಪಾಗಿರಿಸುವ ನೈಸರ್ಗಿಕ ಪಾನೀಯವಾದ ಎಳನೀರು ಸೇವನೆ ಮಾಡುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಒಂದು ಎಳನೀರು 30 ರೂ.ಗೆ ಸಿಕ್ಕರೂ ಸಹ ಸಾಗಾಟ, ಕೊಯ್ದು ಮಾಡುವುದು, ಕೂಲಿ ಎಲ್ಲಾ ಸೇರಿ ಬೆಂಗಳೂರಿಗೆ ಬರುವಷ್ಟರಲ್ಲಿ 60 ರೂ ಆಗುತ್ತಿದ್ದು ಇದರಲ್ಲಿ ರೈತರಿಗೆ ಸಿಗುವ ಲಾಭ ಅಷ್ಟಕ್ಕಷ್ಟೆ. ಇಲ್ಲಿ ವ್ಯಾಪಾರಿಗಳು ಹೆಚ್ಚಿನ ಲಾಭ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತಾಗಿದೆ.

ಇನ್ನು ಮೇ ಅಂತ್ಯದವರೆಗೂ ರಾಜ್ಯದಲ್ಲಿ ಗರಿಷ್ಟ ಹಾಗೂ ಕನಿಷ್ಟ ತಾಪಮಾನವು ವಾಡಿಕೆಗಿಂತ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದು, ಜನರು ಆರೋಗ್ಯದತ್ತ ಗಮನ ಹರಿಸುವುದು ಸೂಕ್ತ ಎಂದು ಸಲಹೆ ನೀಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದಲ್ಲಿ ಕೃಷಿಕರ ಏಳ್ಗೆಗಾಗಿ ಕೃಷಿ ಯಾಂತ್ರಿಕರಣ ಯೋಜನೆ ಪರಿಣಾಮಕಾರಿಯಾಗಿ ಜಾರಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು…

42 seconds ago

ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ತಗಡೂರು ವಸತಿ ಶಾಲೆಯ ವಿದ್ಯಾರ್ಥಿ ಆಯ್ಕೆ

ನಂಜನಗೂಡು : ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ…

6 mins ago

ಹುಲಿ ದರ್ಶನ : ಗ್ರಾಮಸ್ಥರಲ್ಲಿ ಆತಂಕ

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಕೆರೆಯ ಸಮೀಪವಿರುವ ರೈತ ಕೆಂಪಯ್ಯ ಅವರ ತೋಟದ ಬಳಿ ಮಂಗಳವಾರ ಹುಲಿ ಕಾಣಿಸಿಕೊಂಡಿದ್ದು,…

14 mins ago

ಸಂವಿಧಾನ ಅರ್ಥೈಸಿಕೊಂಡಲ್ಲಿ ಕೋಮು ಸಂಘರ್ಷ ರಹಿತ ಸಮಾಜ ನಿರ್ಮಾಣ : ಪ್ರಾ. ಅಸ್ನಾ ಉರೂಜ್‌

ಮೈಸೂರು : ಎಲ್ಲರಿಗೂ ಸಮಾನ ಅವಕಾಶ, ಸಮಾನ ಹಕ್ಕುಗಳನ್ನು ಒದಗಿಸಿರುವ ಸಂವಿಧಾನವನ್ನು ಸಂಪೂರ್ಣವಾಗಿ ಓದಿ ಅರ್ಥ ಮಾಡಿಕೊಂಡರೆ ಮಾತ್ರ ಕೋಮು…

24 mins ago

ಗೃಹಲಕ್ಷ್ಮಿ ಗದ್ದಲ : ಸರ್ಕಾರದ ವಿರುದ್ಧ ವಿಪಕ್ಷ ಆಕ್ರೋಶ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಸಚಿವರು 1.20…

1 hour ago

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ತಪಾಸಣೆ: ಕೈದಿಗಳ ಬಳಿ ಮಾರಕಾಸ್ತ್ರಗಳು ಪತ್ತೆ

ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ…

3 hours ago