ರಾಜ್ಯ

ಏಪ್ರಿಲ್‌ನಿಂದ ವಿದ್ಯುತ್‌ ದರ ಹೆಚ್ಚಳ

ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲು ಕರ್ನಾಟಕ ವಿದ್ಯುತ್ ಸುಧಾರಣಾ ಆಯೋಗ( ಕೆಇಆರ್‍ಸಿ) ತೀರ್ಮಾನಿಸಿದೆ.

ಈಗಾಗಲೇ 2025-26, 2026-27 ಮತ್ತು 2027-28ನೇ ಆರ್ಥಿಕ ವರ್ಷಗಳಿಗೆ ದರ ನಿಗದಿ ಮಾಡಲಾಗಿತ್ತು. ಆದರೆ, ಈಗ ಎದುರಾಗಿರುವ ನಷ್ಟವನ್ನು ಸರಿದೂಗಿಸಲು ಹೆಚ್ಚುವರಿ ದರ ಏರಿಕೆಗೆ ಕೆಇಆರ್‍ಸಿ ಚಿಂತನೆ ನಡೆಸಿದೆ.

ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದ ನಂತರ 2026ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಪರಿಷ್ಕೃತ ವಿದ್ಯುತ್ ದರ ಪ್ರಕಟವಾಗುವ ಸಾಧ್ಯತೆಯಿದೆ. ಇದು ಜಾರಿಯಾದರೆ ಗ್ರಾಹಕರ ಜೇಬಿಗೆ ಕತ್ತರಿ ಬೀಳುವುದು ಖಚಿತ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಮುಂದೆ ಎಸ್ಕಾಂಗಳು ಸಲ್ಲಿಸಿರುವ ಪ್ರಸ್ತಾವನೆಯ ಪ್ರಕಾರ, ಏಪ್ರಿಲ್ 1, 2026ರಿಂದ ವಿದ್ಯುತ್ ದರದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ. ಪ್ರತಿ ಯೂನಿಟ್‍ಗೆ ಸರಾಸರಿ 12 ರಿಂದ 15 ಪೈಸೆ ಏರಿಕೆಯಾಗಬಹುದು.

ರಾಜ್ಯದ ಐದು ಎಸ್ಕಾಂಗಳು ಸಲ್ಲಿಸಿರುವ ಪ್ರಸ್ತಾವನೆಯ ಪ್ರಕಾರ, 2026-27ಗೆ ಸರಾಸರಿ 64 ಪೈಸೆಯಷ್ಟು ದರ ಏರಿಕೆ ಕೇಳಲಾಗಿದೆ. ಆದರೆ ಕೆಲವು ವರ್ಗಗಳಲ್ಲಿ ಇದು 67ರಿಂದ 99 ಪೈಸೆಗಳವರೆಗೆ ಏರಿಕೆಯಾಗಬಹುದು ಎಂದು ಸೂಚನೆಗಳಿವೆ. ದಿನಬಳಕೆ (ಡೊಮೆಸ್ಟಿಕ್) ವಿದ್ಯುತ್ ಬಳಕೆಯಲ್ಲಿ ಸ್ವಲ್ಪ ಏರಿಕೆಯಾಗಬಹುದು. ಕೈಗಾರಿಕಾ ಮತ್ತು ವಾಣಿಜ್ಯ ವಲಯದಲ್ಲಿ ಬಳಸುವ ವಿದ್ಯುತ್ ದರದಲ್ಲೂ ಹೆಚ್ಚಳ ಸಾಧ್ಯತೆ ಇದೆ.ಕೆಲವು ವರ್ಗಗಳಲ್ಲಿ ಇದು ಹೆಚ್ಚು ಆಗಬಹುದು. ಫಿಕ್ಸೆಡ್ ಚಾರ್ಜ್‍ನಲ್ಲೂ 10 ರಿಂದ 20 ರೂ.ವರೆಗೆ ಏರಿಕೆ ಸಾಧ್ಯತೆ ಇದೆ.

ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ಆದಾಯ ಕೊರತೆಯನ್ನು ಎದುರಿಸುತ್ತಿವೆ. ರಾಜ್ಯದ ಎಲ್ಲಾ ಎಸ್ಕಾಂಗಳು ಸೇರಿ ಅಂದಾಜು 4,500 ಕೋಟಿ ರೂ. ನಷ್ಟದಲ್ಲಿವೆ. ಇದರಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಒಂದರಲ್ಲೆ? 2024-25ನೇ ಸಾಲಿನಲ್ಲಿ ಬರೋಬ್ಬರಿ 2,800 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಂಪನಿಗಳು ದರ ಏರಿಕೆಗೆ ಪಟ್ಟು ಹಿಡಿದಿವೆ.

ಎಸ್ಕಾಂಗಳ ಆದಾಯದ ಕೊರತೆಯನ್ನು ಸರಿದೂಗಿಸಲು ಪರ್ಯಾಯ ವ್ಯವಸ್ಥೆಗೆ ಮನವಿ ಮಾಡಲಾಗಿದೆ. 2025 ರ ಮಾರ್ಚ್‍ನಲ್ಲಿ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಪ್ರತಿ ಯೂನಿಟ್ಗೆ  36 ಪೈಸೆಯಷ್ಟು ವಿದ್ಯುತ್ ದರವನ್ನು ಹೆಚ್ಚಿಸಿತ್ತು. ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ತಮ 4,620 ಕೋಟಿ ರೂಪಾಯಿಗಳ ಆದಾಯದ ಅಂತರವನ್ನು ಸರಿದೂಗಿಸಲು ವಿದ್ಯುತ್ ಸರಬರಾಜು ನಿಗಮ ನಿಯಮಿತ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವನ್ನು ಕೋರಿದೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಮಾರ್ಚ್‍ನಲ್ಲಿ ದರ ಪರಿಷ್ಕರಣೆ ಮಾಡಿದಾಗ ಕೆಇಆರ್‍ಸಿ ಅಂದಾಜು ಮಾಡಿದ್ದ ಲೆಕ್ಕಾಚಾರದಲ್ಲಿ ವೆಚ್ಚ ಹೆಚ್ಚಾಗಿದ್ದರೆ, ಆದಾಯದಲ್ಲಿ ಖೋತಾ ಆಗಿದೆ. ಇದರ ನಡುವೆ ಸಮತೋಲನ ಕಾಪಾಡಲು ದರ ಪರಿಷ್ಕರಣೆ ಮಾಡುವ ಅಗತ್ಯವಿದೆ ಎಂದು ಎಸ್ಕಾಂಗಳು ಕೆಇಆರ್ಸಿಗೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿವೆ. ಒಟ್ಟಾರೆ ಪ್ರಸ್ತುತ ಹಾಗೂ ಮುಂದಿನ ಎರಡೂ ಆರ್ಥಿಕ ವರ್ಷಗಳಿಗೆ ವಿದ್ಯುತ್ ದರ ನಿಗದಿ ಮಾಡಲಾಗಿದ್ದರೂ, ಈ ಹಿಂದಿನ ವರ್ಷದ ನಷ್ಟ ಸರಿದೂಗಿಸಲು ಹೆಚ್ಚುವರಿ ವಿದ್ಯುತ್ ದರ ಏರಿಕೆಯೇ ಕೆಇಆರ್‍ಸಿಗೆ ಇರುವ ಮಾರ್ಗ ಎನ್ನಲಾಗುತ್ತಿದೆ.

ಸಾರ್ವಜನಿಕರ ಆಕ್ಷೇಪಣೆಗೆ ಆಹ್ವಾನ
ಬೆಸ್ಕಾಂ ಸೇರಿದಂತೆ ರಾಜ್ಯದ ವಿವಿಧ ಎಸ್ಕಾಂಗಳು 2024-25ನೇ ಸಾಲಿನ ತಮ್ಮ ಕಾರ್ಯನಿರ್ವಹಣಾ ವರದಿಯನ್ನು ಮತ್ತು ದರ ಏರಿಕೆಯ ಪ್ರಸ್ತಾವನೆಯನ್ನು ಕೆಇಆರ್‍ಸಿಗೆ ಸಲ್ಲಿಸಿವೆ. ವರದಿ ಸಲ್ಲಿಕೆಯ ಬೆನ್ನಲ್ಲೆ? ಆಯೋಗವು ಸಾರ್ವಜನಿಕರ ಅಹವಾಲು ಮತ್ತು ಆಕ್ಷೇಪಣೆಗಳನ್ನು ಆಲಿಸಲು ಮುಂದಾಗಿದೆ. ಈಗಾಗಲೇ ಫೆಬ್ರವರಿ 16 ರಿಂದ ಫೆಬ್ರವರಿ 27ರವರೆಗೆ ರಾಜ್ಯದ ನಾನಾ ಭಾಗಗಳಲ್ಲಿ ಕೆಇಆರ್‍ಸಿ ಸಾರ್ವಜನಿಕ ವಿಚಾರಣಾ ಸಭೆಗಳನ್ನು ನಡೆಸಲಿದೆ. ಈ ಸಭೆಗಳಲ್ಲಿ ಗ್ರಾಹಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

6 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

7 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

7 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

8 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

8 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

12 hours ago