ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಜೋರಾಗಿದ್ದು, ಇದನ್ನು ನೋಡಿ ನೋಡಿ ಜನರು ಬೇಸತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಬದಲಾವಣೆಯಾಗಬಹುದು. ಎಲ್ಲವನ್ನೂ ಕಾದುನೋಡಬೇಕಿದೆ ಎಂದು ಹೇಳಿದರು.
ರಾಜ್ಯದಲ್ಲಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅಭಿವೃದ್ಧಿ ಕೆಲಸಗಳು ಕುಂಟಿತವಾಗಿವೆ. ಹಲವಾರು ಸಮಸ್ಯೆಗಳಿವೆ. ಸರ್ಕಾರ ಕುರ್ಚಿ ಕಿತ್ತಾಟ ಬಿಟ್ಟು ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು.





