ಬೆಂಗಳೂರು : ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಕುರಿತು ರಾಜ್ಯ ಕಾಂಗ್ರೆಸ್ ಕಾಲೆಳೆದಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ “ಯಡಿಯೂರಪ್ಪನವರ ಮಗ” ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ “ಯಡಿಯೂರಪ್ಪನವರ ಮಗ”ನಿಗೆ ಅಭಿನಂದನೆಗಳು. “ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ” ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದೆ.
ರಾಜ್ಯ ವಿಧಾನ ಸಭಾ ಚುನಾವಣೆಯ ಸೋಲಿನ ಹೊಣೆಹೊತ್ತು ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ ನಂತರ ಈ ಸ್ಥಾನಕ್ಕೆ ಹಲವಾರು ನಾಯಕರ ಹೆಸರು ಕೇಳಿಬಂದಿತ್ತು. ಅಚ್ಚರಿಯಂಬಂತೆ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರಗೆ ಮಣೆ ಹಾಕುವ ಮೂಲಕ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.