ಬೆಂಗಳೂರು : ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಕುರಿತು ರಾಜ್ಯ ಕಾಂಗ್ರೆಸ್ ಕಾಲೆಳೆದಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ “ಯಡಿಯೂರಪ್ಪನವರ ಮಗ” ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ “ಯಡಿಯೂರಪ್ಪನವರ ಮಗ”ನಿಗೆ ಅಭಿನಂದನೆಗಳು. “ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ” ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದೆ.
ರಾಜ್ಯ ವಿಧಾನ ಸಭಾ ಚುನಾವಣೆಯ ಸೋಲಿನ ಹೊಣೆಹೊತ್ತು ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ ನಂತರ ಈ ಸ್ಥಾನಕ್ಕೆ ಹಲವಾರು ನಾಯಕರ ಹೆಸರು ಕೇಳಿಬಂದಿತ್ತು. ಅಚ್ಚರಿಯಂಬಂತೆ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರಗೆ ಮಣೆ ಹಾಕುವ ಮೂಲಕ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…
ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…
ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…
ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…