ಬೆಂಗಳೂರು: ಹೊಸ ವರ್ಷದ ಆಚರಣೆಗೆ ಜನ ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ.
ಕರ್ನಾಟಕದ ಪ್ರವಾಸಿ ತಾಣಗಳು ಜನ ಜಂಗುಳಿಯಿಂದ ತುಂಬಿ ತುಳುಕುತ್ತಿದೆ. ಪ್ರವಾಸಿಗರು ಹೊಸ ವರ್ಷಕ್ಕೆ ವೆಲ್‌ಕಂ ಹೇಳೋದಕ್ಕೆ ಪ್ರವಾಸಿ ತಾಣಗಳಲ್ಲಿ ಕಾತುರದಿಂದ ಕಾಯುತ್ತಿದ್ದಾರೆ. ಹೋಂ ಸ್ಟೇ, ರೆಸಾರ್ಟ್, ಲಾಡ್ಜ್, ಹೋಟೆಲ್‌ಗಳು ಕೂಡ ತುಂಬಿ ತುಳುಕುತ್ತಿವೆ.
ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಅದರಲ್ಲೂ ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಹಿಂಡ ಬಂದು ಪಕ್ಷಿ ಸಂಕುಲವನ್ನು ವೀಕ್ಷಣೆ ಮಾಡುತ್ತಿದ್ದಾರೆ.
ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಇಲ್ಲಿ ದೋಣಿ ವಿಹಾರ ಮಾಡಿ ಮೊಸಳೆ ಹಾಗೂ ಪಕ್ಷಿ ಸಂಕುಲವನ್ನು ವೀಕ್ಷಣೆ ಮಾಡಿ ಎಂಜಾಯ್ ಮಾಡುತ್ತಿದ್ದಾರೆ.
ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರಮುಖ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ ಏರ್ಪಟ್ಟಿದೆ.
ಹೊಸ ವರ್ಷ ಆಚರಣೆಗೆ ಜನ ಪ್ರವಾಸಿ ತಾಣಗಳತ್ತ ಮುಖಮಾಡಿದ್ದಾರೆ. ಕರ್ನಾಟಕದ ಪ್ರವಾಸಿ ತಾಣಗಳು ಜನಜಂಗುಳಿಯಿಂದ ತುಂಬಿ ತುಳುಕುತ್ತಿದೆ.





