Columbus
0
overcast clouds

Social Media

ಶನಿವಾರ, 13 ಡಿಸೆಂಬರ್ 2025
Light
Dark

ರಾಜ್ಯ ಸರ್ಕಾರದ ವಿರುದ್ಧ ಜನ ದಂಗೆ ಏಳುವ ಪರಿಸ್ಥಿತಿ ಇದೆ: ಜಗದೀಶ್ ಶೆಟ್ಟರ್

ಬೆಳಗಾವಿ: ಇಂಧನ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನೂತನ ಸಂಸದ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿರುವ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್ ಐದು ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ಇಂಧನ ಬೆಲೆ ಹೆಚ್ಚಳ ಮಾಡಿದ್ದಾರೆ.
ಜನರಿಗೆ ಅವಶ್ಯಕವಲ್ಲದ ಗ್ಯಾರಂಟಿ ಯೋಜನೆಯಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗ್ತಿದೆ. ಖಾಲಿಯಾಗಿರುವ ಬೊಕ್ಕಸವನ್ನು ಸರಿದೂಗಿಸಲು ಇಂಧನ ಬೆಲೆ ಜಾಸ್ತಿ ಮಾಡಿದ್ದಾರೆ. ಮಾತು ಮಾತಿಗೂ ಬಿಜೆಪಿ ಸರ್ಕಾರ ಇರುವ ರಾಜ್ಯದಲ್ಲಿ ಇಂಧನ ಬೆಲೆ ಜಾಸ್ತಿ ಇದೆ ಅಂತ ಸಿದ್ದರಾಮಯ್ಯ ಹೇಳ್ತಿದ್ದಾರೆ. ಆದರೆ ಪಕ್ಕದ ಗೋವಾದಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಆದ್ರೆ ಅಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಲ್ಲಿಗಿಂತ 9 ರೂಪಾಯಿ ಕಡಿಮೆಯಿದೆ.
ಈ ಎಲ್ಲಾ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಉತ್ತರ ಕೊಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲದರ ಮೇಲೂ ತೀವ್ರ ಪರಿಣಾಮ ಬೀರುತ್ತೆ. ಹಾಗಾಗಿ ರಾಜ್ಯ ಸರ್ಕಾರ ಆದಷ್ಟು ಬೇಗ ಇಂಧನ ಬೆಲೆ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

Tags:
error: Content is protected !!