Mysore
34
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಸಾಮಾಜಿಕ ಕಳಕಳಿ ಇರುವ ವ್ಯಕ್ತಿಗಳು ಸಿಎಂ ಆಗಬೇಕು : ಎಸ್.ಎಂ.ಕೃಷ್ಣ

ಮದ್ದೂರು : ನಾನೇ ಐದು ವರ್ಷ ಸಿಎಂ ಆಗುತ್ತೇನೆ ಎಂಬ ಕಾಲಘಟ್ಟಕ್ಕೆ ತಲುಪುವುದು ಅನಾರೋಗ್ಯಕರ. ಈಗ ಈ ಪ್ರಶ್ನೆ ಉದ್ಭವಿಸಬೇಕಾಗಿರಲಿಲ್ಲ. ಇತಿ ಮಿತಿ ಗಮನದಲ್ಲಿಟ್ಟುಕೊಂಡು ಮುಂದುವರೆದರೆ ಈ ದ್ವಂದ್ವಕ್ಕೆ ಪರಿಹಾರ ಸಿಗಬಹುದು ಎಂದು ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಕಿವಿ ಮಾತು ಹೇಳಿದರು.

ರಾಜ್ಯದಲ್ಲಿ ಸಿಎಂ ದ್ವಂದ್ವ ವಿಚಾರ ಕುರಿತು ಮದ್ದೂರಿನಲ್ಲಿ‌ ಇಂದು ಮಾತನಾಡಿದ ಅವರು, ಜಾತಿ‌ ಆಧಾರದ ಮೇಲೆ ಸಿಎಂ ಆಯ್ಕೆ ಮಾಡೋದು ಪ್ರಜಾಪ್ರಭುತ್ವದ ಅಣಕ. ಯೋಗ್ಯತೆ, ಸಾಧನೆ, ಸಾಮಾಜಿಕ ಕಳಕಳಿ ಇರುವ ವ್ಯಕ್ತಿಗಳು ಸಿಎಂ ಆಗಬೇಕು. ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ಮಾಡೋದು ಸರಿಯಲ್ಲ ಎಂದು ಎಸ್.ಎಂ.ಕೃಷ್ಣ ತಿಳಿಸಿದರು.

ಪ್ರತಿ ರಾಜಕೀಯ ಕಾಲಘಟ್ಟದಲ್ಲಿ ಒಂದೊಂದು ತಿರುವು ಇರುತ್ತೆ. ಭ್ರಷ್ಟಾಚಾರ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ಮಾರಕ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!