ಮದ್ದೂರು : ನಾನೇ ಐದು ವರ್ಷ ಸಿಎಂ ಆಗುತ್ತೇನೆ ಎಂಬ ಕಾಲಘಟ್ಟಕ್ಕೆ ತಲುಪುವುದು ಅನಾರೋಗ್ಯಕರ. ಈಗ ಈ ಪ್ರಶ್ನೆ ಉದ್ಭವಿಸಬೇಕಾಗಿರಲಿಲ್ಲ. ಇತಿ ಮಿತಿ ಗಮನದಲ್ಲಿಟ್ಟುಕೊಂಡು ಮುಂದುವರೆದರೆ ಈ ದ್ವಂದ್ವಕ್ಕೆ ಪರಿಹಾರ ಸಿಗಬಹುದು ಎಂದು ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಕಿವಿ ಮಾತು ಹೇಳಿದರು.
ರಾಜ್ಯದಲ್ಲಿ ಸಿಎಂ ದ್ವಂದ್ವ ವಿಚಾರ ಕುರಿತು ಮದ್ದೂರಿನಲ್ಲಿ ಇಂದು ಮಾತನಾಡಿದ ಅವರು, ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ಮಾಡೋದು ಪ್ರಜಾಪ್ರಭುತ್ವದ ಅಣಕ. ಯೋಗ್ಯತೆ, ಸಾಧನೆ, ಸಾಮಾಜಿಕ ಕಳಕಳಿ ಇರುವ ವ್ಯಕ್ತಿಗಳು ಸಿಎಂ ಆಗಬೇಕು. ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ಮಾಡೋದು ಸರಿಯಲ್ಲ ಎಂದು ಎಸ್.ಎಂ.ಕೃಷ್ಣ ತಿಳಿಸಿದರು.
ಪ್ರತಿ ರಾಜಕೀಯ ಕಾಲಘಟ್ಟದಲ್ಲಿ ಒಂದೊಂದು ತಿರುವು ಇರುತ್ತೆ. ಭ್ರಷ್ಟಾಚಾರ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ಮಾರಕ ಎಂದರು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…