Mysore
24
haze

Social Media

ಶನಿವಾರ, 27 ಡಿಸೆಂಬರ್ 2025
Light
Dark

ಸಿದ್ದರಾಮಯ್ಯ ಟೀಕೆಗಳಿಗೆಲ್ಲಾ ಜನರು ಉತ್ತರ ಕೊಡುತ್ತಾರೆ: ಎಚ್‌.ಡಿ ಕುಮಾರಸ್ವಾಮಿ

ಮೈಸೂರು: ತಾವು ಸಿಎಂ ಆಗಿದ್ದಾಗಲೇ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಆದರೆ ಈ ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ನನ್ನನ್ನು ವಲಸಿಗ ಎಂದು ಸಿಎಂ ಹೇಳಿದ್ದಾರೆ. ಆದರೆ, ಕಾಂಗ್ರೆಸ್​​ನಲ್ಲಿ ಅವರು ಕೂಡಾ ವಲಸಿಗರೇ ಆಗಿದ್ದಾರೆ. ಈಗ ಮೂಲ ಕಾಂಗ್ರೆಸ್ಸಿಗರನ್ನು ಕಸದಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.

ಮಗನನ್ನು ಗೆಲ್ಲಿಸಿಕೊಳ್ಳಲು ಆಗದ ಎಚ್‌ಡಿಕೆ ಮಂಡ್ಯದಲ್ಲಿ ಸೋಲುತ್ತಾರೆ ಎಂಬ ಹೇಳಿಕೆಗೆ, ಸಿಎಂ ಸ್ಥಾನದಲ್ಲಿದ್ದುಕೊಂಡು ಅಧಿಕಾರ ನಡೆಸೋದು ಬಿಟ್ಟು ನನ್ನ ಸೋಲಿನ ಬಗ್ಗೆ ಹೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ವ್ಯಂಗ್ಯವಾಡಿದರು.

ನಾನು ಕನ್ನಡಿಗ ಎಲ್ಲಿ ಬೇಕಾದರೂ ನಾನು ಸ್ಪರ್ಧೆ ಮಾಡಬಹುದು. ಈ ಬಾರಿ ಮಂಡ್ಯದಲ್ಲಿ ಹಳೆಯ ಸ್ನೇಹಿತರ ಜೊತೆ ಸ್ಪರ್ಧೆ ಎದುರಿಸಬೇಕು. ಸ್ನೇಹಿತರ ಎದುರು ಸ್ಪರ್ಧೆಗಿಳಿಯುತ್ತಿರುವುದು ನನ್ನ ಹಣೆಬರಹ ಎಂದು ವಿಷಾದ ವ್ಯಕ್ತಪಡಿಸಿದರು.

Tags:
error: Content is protected !!