ರಾಜ್ಯ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳ ಘಟಕವತಿಯಿಂದ ನಾಳೆ ಬೃಹತ್ ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ಇಂದಿನ (ಆಗಸ್ಟ್ 20) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಅನಂತ್ ನಾಯ್ಕ, ವಿದ್ಯಾರ್ಥಿ ಜಾಗೃತಿ ಸಮಿತಿ ಅಧ್ಯಕ್ಷ ಅನಿಲ್ ರೆಡ್ಡಿ ಮಾತನಾಡಿ, ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರ ಕುತಂತ್ರಗಳನ್ನು ವಿರೋಧಿಸಿ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಬೆಂಗಳೂರಿನ ಮೌರ್ಯ ವೃತ್ತದಿಂದ ರಾಜಭವನದವರೆಗೆ ಪಂಜಿನ‌ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ,ಆಗಸ್ಟ್ 27ರಂದು ರಾಜಭವನ ಮುತ್ತಿಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಈ ಪಿತ್ತೂರಿಯ ವಿರುದ್ಧ ರಾಜ್ಯವ್ಯಾಪಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಜತೆಗೂಡಿ ಹೋರಾಟ ನಡೆಸಲಾಗುವುದು ಎಂದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ, ರಾಜ್ಯ ಬಿಜೆಪಿಯ ಕೈ ಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಭವನ ದುರ್ಬಳಕೆ ಮಾಡಿಕೊಂಡು ಸಿದ್ದರಾಮಯ್ಯ ಅವರನ್ನು ಹತ್ತಿಕ್ಕುವ ಕೆಲಸ ನಡೆದಿದೆ. ಭಾರತದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ಸಂರಕ್ಷಕರಾಗಿ ಕಾರ್ಯನಿರ್ವಹಿಸಬೇಕಿದ್ದ ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟರಂತೆ ವರ್ತಿಸುತ್ತಾ ಪ್ರಜಾ ಪ್ರಭುತ್ವ ಕಗ್ಗೊಲೆ ಮಾಡುತ್ತಿದ್ದಾರೆ ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳನ್ನು ಸಂಘಟಿಸಿ ಬೃಹತ್ ಹೋರಾಟ ನಡೆಸಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳ ಪರವಾಗಿ ಅನೇಕ ಯೋಜನೆಗಳನ್ನು ಜಾರಿ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹತ್ತಿಕ್ಕುವ ಪ್ರಯತ್ನದ ವಿರುದ್ದ ರಾಜ್ಯದ ಎಲ್ಲ ಕಾಲೇಜು, ವಿಶ್ವವಿದ್ಯಾಲಯ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಸ್ನಾತಕೋತ್ತರ ಮತ್ತು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸತೀಶ್ ಜಿ.ಕೆ. ಪ್ರಧಾನ ಕಾರ್ಯದರ್ಶಿ ಮೆಡಲ್ ಮುನಿ ಚಂದ್ರು, ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಶ್ರೀನಾಥ್ ಮತ್ತಿತರರು ಭಾಗವಹಿಸಿದ್ದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago