Mysore
34
few clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

DCM D.K. Shivakumar says there will be a big revolution in the state by 2028

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಯುವಕರು ಹಾಗೂ ಕ್ರಿ

ಕೆಟ್‌ ಕ್ರೀಡೆಯ ಹಿತದೃಷ್ಟಿಯಿಂದ ಅನುಮತಿಸಲಾಗಿದೆ ಎಂದರು.

ಕಳೆದ ವರ್ಷ (2025) ಆರ್‌ಸಿಬಿ ಐಪಿಎಲ್ ಟ್ರೋಫಿ ಸಮಾರಂಭದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಿಷೇಧಿಸಲಾಗಿತ್ತು. ನ್ಯಾಯಮೂರ್ತಿ ಮೈಕಲ್ ಕುನ್ಹಾ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಅಂತಿಮವಾಗಿ ಅನುಮತಿ ನೀಡಲಾಗಿದೆ.

ಕ್ರೀಡಾಂಗಣದ ಸಾಮರ್ಥ್ಯದಷ್ಟು ಮಾತ್ರ ಟಿಕೆಟ್‌ ಮಾರಾಟ ಮಾಡಬೇಕು. ಜನದಟ್ಟಣೆ ಅಗತ್ಯಕ್ಕೆ ತಕ್ಕಂತೆ ದೊಡ್ಡ ಗೇಟ್‌ಗಳ ಅಳವಡಿಕೆ, ಆಂಬುಲೆನ್ಸ್‌ ನಿಯೋಜನೆ ಸೇರಿದಂತೆ ಕುನ್ಹಾ ಅವರ ವರದಿಯ ಶಿಫಾರಸ್ಸುಗಳ ಅನುಗುಣವಾಗಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂಬ ಷರತ್ತಿನೊಂದಿಗೆ ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Tags:
error: Content is protected !!