Mysore
21
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ ನಡೆಸಬೇಕಾದರೆ ತೋಟಗಾರಿಕೆ ಇಲಾಖೆ ಹಾಗೂ ಪೊಲೀಸ್‌ ಇಲಾಖೆಯಲ್ಲಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಏಕೆಂದರೆ ಇತ್ತೀಚಿನ ದಿನಗಳಲ್ಲಿ ಕಬ್ಬನ್‌ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳ ಗುಂಪು ಚಟುವಟಿಕೆಗಳು ಹೆಚ್ಚಾಗಿ ಗದ್ದಲ ಮೂಡಿಸುತ್ತಿರುವುದು ಆಗಾಗ ಸುದ್ದಿಯಾಗುತ್ತಲೇ ಇದೆ. ಗದ್ದಲ ಜಾಸ್ತಿಯಾಗುತ್ತಿರುವುದರಿಂದ ಅಲ್ಲಿಗೆ ಬರುವ ಜನರಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಬ್ಬನ್‌ ಪಾರ್ಕ್‌ ಆಡಳಿತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.

ಇಂದು ಕಬ್ಬನ್‌ ಪಾರ್ಕ್‌ನಲ್ಲಿ ಸೀಕ್ರೇಟ್‌ ಸಂತ ಹೆಸರಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಭಾಗಿಯಾಗಿ ಗದ್ದಲ ಉಂಟು ಮಾಡಿ ಅಲ್ಲಿಗೆ ವಿಹಾರಕ್ಕೆಂದು ಬಂದಿದ್ದ ಪುಸ್ತಕ ಪ್ರೇಮಿಗಳು, ಸಾಹಿತ್ಯ ಆಸಕ್ತರಿಗೆ ಕಿರಿಕಿರಿ ಉಂಟುಮಾಡಿದ್ದರು. ಇದಕ್ಕಾಗಿ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆಗಳನ್ನು ನಡೆಸಬೇಕಾದರೆ ತೋಟಗಾರಿಕೆ ಇಲಾಖೆ ಹಾಗೂ ಪೊಲೀಸ್‌ ಇಲಾಖೆಯಲ್ಲಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಒಂದು ವೇಳೆ ಅನುಮತಿ ಪಡೆಯದೇ ಕಬ್ಬನ್‌ ಪಾರ್ಕ್‌ನಲ್ಲಿ ಗದ್ದಲ ಉಂಟು ಮಾಡಿದರೆ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

 

Tags: