ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ ನಡೆಸಬೇಕಾದರೆ ತೋಟಗಾರಿಕೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ಏಕೆಂದರೆ ಇತ್ತೀಚಿನ ದಿನಗಳಲ್ಲಿ ಕಬ್ಬನ್ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳ ಗುಂಪು ಚಟುವಟಿಕೆಗಳು ಹೆಚ್ಚಾಗಿ ಗದ್ದಲ ಮೂಡಿಸುತ್ತಿರುವುದು ಆಗಾಗ ಸುದ್ದಿಯಾಗುತ್ತಲೇ ಇದೆ. ಗದ್ದಲ ಜಾಸ್ತಿಯಾಗುತ್ತಿರುವುದರಿಂದ ಅಲ್ಲಿಗೆ ಬರುವ ಜನರಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಆಡಳಿತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಇಂದು ಕಬ್ಬನ್ ಪಾರ್ಕ್‌ನಲ್ಲಿ ಸೀಕ್ರೇಟ್ ಸಂತ ಹೆಸರಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಭಾಗಿಯಾಗಿ ಗದ್ದಲ ಉಂಟು ಮಾಡಿ ಅಲ್ಲಿಗೆ ವಿಹಾರಕ್ಕೆಂದು ಬಂದಿದ್ದ ಪುಸ್ತಕ ಪ್ರೇಮಿಗಳು, ಸಾಹಿತ್ಯ ಆಸಕ್ತರಿಗೆ ಕಿರಿಕಿರಿ ಉಂಟುಮಾಡಿದ್ದರು. ಇದಕ್ಕಾಗಿ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.
ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆಗಳನ್ನು ನಡೆಸಬೇಕಾದರೆ ತೋಟಗಾರಿಕೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ಒಂದು ವೇಳೆ ಅನುಮತಿ ಪಡೆಯದೇ ಕಬ್ಬನ್ ಪಾರ್ಕ್‌ನಲ್ಲಿ ಗದ್ದಲ ಉಂಟು ಮಾಡಿದರೆ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…