ಬೆಂಗಳೂರು : ರಸ್ತೆ ಮೇಲೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಿ ಅನುಮತಿ ಪಡೆದುಕೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು, ಪ್ರಾರ್ಥನೆಗೆ ಅವಕಾಶ ಕೊಡಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅವರು ಕೂಡ ಪರವಾನಗಿ ಪಡೆಯಬೇಕು. ಅವರು ಅರ್ಜಿ ಹಾಕಿ ಅನುಮತಿ ಪಡೆದುಕೊಳ್ಳಬೇಕು. ಈ ಸಂಬಂಧ ಯತ್ನಾಳ್ ಅವರು ಇಂಗ್ಲಿಷ್ ನಲ್ಲಿ ಪತ್ರ ಬರೆದಿದ್ದೇ ವಿಶೇಷ ಅನಿಸುತ್ತದೆ. ಯಾರಿಗೆ ಸಂದೇಶ ಕೊಡುವುದಕ್ಕೆ ಇಂಗ್ಲಿಷ್ ನಲ್ಲಿ ಪತ್ರ ಬರೆದಿದ್ದಾರೋ ಗೊತ್ತಿಲ್ಲ. ಸಿಎಂ ಅವರಿಗೆ ಗೊತ್ತಾಗಲಿ ಅಂತಾನೋ, ಅಮಿತ್ ಶಾಗೆ ಗೊತ್ತಾಗಲಿ ಎಂದು ಬರೆದ್ರಾ ಗೊತ್ತಿಲ್ಲ ಎಂದು ಕಿಡಿ ಕಾರಿದರು.





