ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‍ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭಾರೀ ಮುಖಭಂಗವಾಗಿದೆ.
ಆರ್‌ಎಸ್‍ಎಸ್ ಗೆ ಪಥಸಂಚಲನ ನಡೆಸಲು ಅನುಮತಿ ನೀಡದ ಚಿತ್ತಾಪುರ ತಹಸೀಲ್ದಾರ್ ನಾಗಯ್ಯ ಅವರ ಆದೇಶವನ್ನು ಪ್ರಶ್ನಿಸಿ ಆರ್‌ಎಸ್‍ಎಸ್ ಪರವಾಗಿ ಅಶೋಕ್ ಪಾಟೀಲ್ ಎಂಬುವವರು ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನು ಓದಿ: ನಾವು ಆರ್‌ಎಸ್‌ಎಸ್‌ನ್ನು ಟಾರ್ಗೆಟ್ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ
ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ನಂತರ ನ.2ಕ್ಕೆ ಪಥಸಂಚಲನ ನಡೆಸಲು ಅನುಮತಿ ನೀಡಿದ ಕಲಬುರಗಿ ಸಂಚಾರಿ ಪೀಠ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಸರ್ಕಾರ ಇದನ್ನು ಪರಿಗಣಿಸಬೇಕೆಂದು ಸೂಚಿಸಿತು.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಹಾಗೂ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.
ಕಲಬುರಗಿ ಸಂಚಾರಿ ಪೀಠದ ನ್ಯಾಯಾಧೀಶ ಎ.ಜಿ.ಎಸ್.ಕಮಲ್ ಅವರು ನ.2ರಂದು ಆರ್‍ಎಸ್‍ಎಸ್ ಪಥಸಂಚಲನಕ್ಕೆ ಅನುಮತಿ ನೀಡಿದರಾದರೂ ಭಾನುವಾರವೇ ಪಥಸಂಚಲನ ನಡೆಸಬೇಕೆಂಬ ಆರ್ ಎಸ್‍ಎಸ್ ಮನವಿಗೆ ಸಮ್ಮತಿಸಲಿಲ್ಲ. ಮುಂದಿನ ಅರ್ಜಿ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿತು.





