ಆನೇಕಲ್ ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಕೊಲೆ!

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರ ಕೊಲೆ ಮಾಡಿದ್ದಾರೆ.

ಜಿಗಣಿ ನಿವಾಸಿ ಅರ್ಚನಾರೆಡ್ಡಿಯನ್ನು ಹತ್ಯೆಗೈದಿದ್ದಾರೆ. ನವೀನ್, ಸಂತೋಷ್ ಎಂಬುವವರು ಅರ್ಚನಾರೆಡ್ಡಿಯನ್ನು ಹತ್ಯೆ ಮಾಡಿದ್ದಾರೆ. ಅನೈತಿಕ ಸಂಬಂದ ಹಿನ್ನಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

 

× Chat with us