Mysore
28
few clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ ಘಟನೆ ನಡೆದಿದೆ.

ಬೆಂಗಳೂರಿನ ಬಾಣಸವಾಡಿಯ ಪಂಚಮುಖಿ ದೇವಾಲಯದ ಬಳಿ ಈ ಘಟನೆ ನಡೆದಿದ್ದು, ಸಾಕು ಬೆಕ್ಕು, ನಾಯಿಗಳಿಗೆ ಹಿಂಸೆ ನೀಡಿ ಮರಕ್ಕೆ ಕಟ್ಟಿ ಕೊಂದು ವಿಕೃತಿ ಮೆರೆದಿದ್ದಾರೆ. ವಿಕೃತಿ ಮೆರೆದಿರುವ ಕೀಚಕರ ವಿರುದ್ಧ ಪ್ರಾಣಿಪ್ರಿಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿ: ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಕಳೆದ ನಾಲ್ಕು ದಿನಗಳ ಹಿಂದೆ ಹಲವು ಬೆಕ್ಕಿನ ಮರಿಗಳನ್ನು ತುಂಡು ತುಂಡಾಗಿ ಪೀಸ್‌ ಮಾಡಿ ಎಸೆದು ಹೋಗಿದ್ದರು. ಈಗ ಮತ್ತೆ ನಾಯಿ ಹಾಗೂ ಬೆಕ್ಕಿನ ಮರಿಗಳನ್ನು ಇಲ್ಲಿ ತಂದು ಬರ್ಬರವಾಗಿ ಕೊಂದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಮಾಹಿತಿ ಪ್ರಕಾರ ಈ ಜಾಗದಲ್ಲಿ ಪ್ರಾಣಿಗಳ ಮಾರಣಹೋಮ ಹೆಚ್ಚಾಗಿ ನಡೆಯುತ್ತದೆ. ಸತ್ತ ಪ್ರಾಣಿಗಳ ದುರ್ವಾಸನೆ ಬರುತ್ತದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯ ಎಸಗುವ ಪಾಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

Tags:
error: Content is protected !!