ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ ಘಟನೆ ನಡೆದಿದೆ.
ಬೆಂಗಳೂರಿನ ಬಾಣಸವಾಡಿಯ ಪಂಚಮುಖಿ ದೇವಾಲಯದ ಬಳಿ ಈ ಘಟನೆ ನಡೆದಿದ್ದು, ಸಾಕು ಬೆಕ್ಕು, ನಾಯಿಗಳಿಗೆ ಹಿಂಸೆ ನೀಡಿ ಮರಕ್ಕೆ ಕಟ್ಟಿ ಕೊಂದು ವಿಕೃತಿ ಮೆರೆದಿದ್ದಾರೆ. ವಿಕೃತಿ ಮೆರೆದಿರುವ ಕೀಚಕರ ವಿರುದ್ಧ ಪ್ರಾಣಿಪ್ರಿಯರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನು ಓದಿ: ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್
ಕಳೆದ ನಾಲ್ಕು ದಿನಗಳ ಹಿಂದೆ ಹಲವು ಬೆಕ್ಕಿನ ಮರಿಗಳನ್ನು ತುಂಡು ತುಂಡಾಗಿ ಪೀಸ್ ಮಾಡಿ ಎಸೆದು ಹೋಗಿದ್ದರು. ಈಗ ಮತ್ತೆ ನಾಯಿ ಹಾಗೂ ಬೆಕ್ಕಿನ ಮರಿಗಳನ್ನು ಇಲ್ಲಿ ತಂದು ಬರ್ಬರವಾಗಿ ಕೊಂದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಮಾಹಿತಿ ಪ್ರಕಾರ ಈ ಜಾಗದಲ್ಲಿ ಪ್ರಾಣಿಗಳ ಮಾರಣಹೋಮ ಹೆಚ್ಚಾಗಿ ನಡೆಯುತ್ತದೆ. ಸತ್ತ ಪ್ರಾಣಿಗಳ ದುರ್ವಾಸನೆ ಬರುತ್ತದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯ ಎಸಗುವ ಪಾಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…