CM and Bhanu Musthaq
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು, ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ ದೊರೆತಿದೆ ಎಂದು ಭಾವಿಸುತ್ತೇನೆ.
ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ ಇನ್ನಾದರೂ ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ ಎಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…
ಟೆಹ್ರಾನ್ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…
ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…
ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…
ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…