ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸ್ಟಾರ್ ಚಂದ್ರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಹಿರಿಯ ರಾಜಕೀಯ ನಾಯಕರಾಗಿ ನಾಲ್ಕು ಸದನಗಳನ್ನು ಪ್ರತಿನಿಧಿಸಿದ್ದಾರೆ. ಅಲ್ಲದೇ, ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಮತ್ತು ರಾಜ್ಯಪಾಲರಾಗಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದಾರೆ. ಹೀಗಾಗಿ ಕರ್ನಾಟಕ ನಾಡಿನ ಘನತೆಯನ್ನು ದೇಶಕ್ಕೆ ತಿಳಿಯುವಂತೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಎಸ್.ಎಂ.ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಒತ್ತಾಯಿಸಿದ್ದಾರೆ.





