ಶಿವಮೊಗ್ಗ: ರಾಜ್ಯದ ಹಲವು ಕಡೆ, ಪೊಲೀಸರು ಪಿಎಫ್ಐ ಕಾರ್ಯಕರ್ತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳದ ಸಿಬ್ಬಂದಿ ಕೆಲವರ ನಿವಾಸಗಳ ಮೇಲೆ ದಾಳಿ ನಡೆಸಿದ ವೇಳೆ ಈ ಸಂಘಟನೆಗೆ ಸೇರಿದ ಕೆಲ ಕಾರ್ಯಕರ್ತರು ಬೀದಿಗೆ ಬಂದು ಪ್ರತಿಭಟಿಸಿ ಉದ್ವಿಗ್ನ ವಾತಾವರಣ ನಿರ್ಮಿಸಿದ್ದರು. ಈ ಕಾರಣದಿಂದ ರಾಜ್ಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.