ಬೆಂಗಳೂರು: ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ನಿಜ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ಅವರ ಫೋನ್ ಕದ್ದಾಲಿಕೆಯಾಗಿದೆ. ಇದೇ ರೀತಿ ಹಲವು ಶಾಸಕರ ಫೋನ್ ಕದ್ದಾಲಿಕೆಯಾಗಿದೆ. ರಾಜಣ್ಣ ಮತ್ತು ರಾಜೇಂದ್ರ ಅವರನ್ನು ಟ್ರ್ಯಾಪ್ ಮಾಡಲು ಕದ್ದಾಲಿಕೆ ಮಾಡಿಸಿದ್ದಾರೆ. ಈ ಬಗ್ಗೆ ನಾನು ಮತ್ತು ಕುಮಾರಸ್ವಾಮಿ ಮೊದಲಿನಿಂದಲೂ ಹೇಳುತ್ತಿದ್ದೇವೆ. ಸುಮಾರು 2 ವರ್ಷಗಳಿಂದಲೂ ಫೋನ್ ಕದ್ದಾಲಿಕೆಯಾಗುತ್ತಿದೆ ಎಂದು ಆರೋಪಿಸಿದರು.
ಇನ್ನು ನಾವು ಧರ್ಮಾಧಾರಿತ ಮೀಸಲಾತಿ ವಿಚಾರಕ್ಕೆ ಹೋರಾಟ ಮಾಡುತ್ತಿದ್ದೇವೆ. ಮೀಸಲಾತಿ ಭೂತವನ್ನು ರಾಜ್ಯದ ಹಿಂದೂಗಳ ಮೇಲೆ ಹೇರುತ್ತಿದ್ದಾರೆ. ಕಾಮಗಾರಿಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲು ಮುಂದಾಗಿದ್ದಾರೆ. ಮಂಗಳೂರಿನಲ್ಲಿ ಈಗಾಗಲೇ ಶೇ.5ರಷ್ಟು ಮುಸ್ಲಿಮರು ಗುತ್ತಿಗೆದಾರರಾಗಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಧರ್ಮಾಧಾರಿತ ಮೀಸಲಾತಿ ಬೇಡ ಎಂದಿದ್ದಾರೆ. ಹೀಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…