ರಾಜ್ಯ

ಫೋನ್‌ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಲಿ: ಆರ್‌.ಅಶೋಕ್‌ ಆಗ್ರಹ

ಬೆಂಗಳೂರು: ಫೋನ್‌ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು.

ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಬಿಜೆಪಿ ಪ್ರಮುಖರೊಂದಿಗೆ ಸಭೆಯಲ್ಲಿ ಪಾಲ್ಗೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಫೋನ್‌ ಟ್ಯಾಪಿಂಗ್‌ ಬಗ್ಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್‌ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು.

ಫೋನ್‌ ಟ್ಯಾಪ್‌ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ, ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದರು.

ಫೋನ್‌ ಟ್ಯಾಪ್‌ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಮಾಡಿ ಪೊಲೀಸ್‌ ಅಧಿಕಾರಿಗಳು ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಒತ್ತಾಯಿಸಿದರು.

ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಚರ್ಚಿಸಲಾಗಿದೆ. ಮತದಾರರನ್ನು ಹುಡುಕಿ ಅವರ ಮನ ಒಲಿಸುವ ಕೆಲಸ ಮಾಡಬೇಕೆಂದು ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಸಿ, ಪ್ರತಿ ಬೂತ್‌ಗಳಲ್ಲಿ ಕೆಲಸ ಮಾಡಲು ಸೂಚಿಸಲಾಗಿದೆ. ಟಿಕೆಟ್‌ ಕುರಿತು ಕೇಂದ್ರದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

4 mins ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

8 mins ago

ಕಾಸರಗೋಡು ಸೀಮೆಯಲ್ಲಿ ನಂಜನಗೂಡು ನರಸಣ್ಣ

ಅಕ್ಷತಾ ರಜೆಗೆ ಊರಿಗೆ ಬಂದಿದ್ದೆ. ಒಂದು ಬದಿಯಲ್ಲಿ ಬಂಟಾಜೆ ಕಾಡಿನಲ್ಲಿ ಹುಟ್ಟಿ ಸೀರೆ ನದಿಯನ್ನು ಸೇರುವ ತೊರೆ. ಇನ್ನೊಂದು ಬದಿಯಲ್ಲಿ…

20 mins ago

ಪ್ರಭುಸ್ವಾಮಿ ಬೆಟ್ಟದ ಅರೆಕಲ್ಲ ಮೇಲೆ ಎಡೆಪರು ಊಟ

'ಎಲೆ? ಯಾವೂರೆಲೆ ಕಂಡರಿ ಇಲ್ಲಿ. ಅರೆಕಲ್ಲ ಮೇಲೆನೆ ಊಟ. ಪ್ಲಾಸ್ಟಿಕ್ ಲೋಟದಲ್ಲಿರೋ ನೀರಾ ಮುಂದಿರೋ ಅರೆಕಲ್ಲ ಮೇಲೆ ಚಿಮುಕಿಸಿ ರೆಡಿ…

49 mins ago

ಬೀದಿಗೆ ಬಿದ್ದವರಿಗೆ ಚಳಿಗಾಲ ಎಷ್ಟೊಂದು ನರಕ…

ಹಾದಿಬದಿಯ ನಿರಾಶ್ರಿತರು ಆಕಾಶವನ್ನೇ ಹೊದಿಕೆಯಾಗಿಸಿಕೊಂಡು,ಭೂಮಿಯನ್ನೇ ಹಾಸಿಗೆಯನ್ನಾಗಿಸಿ ಕೊಂಡು ಸಿಕ್ಕ ಕೆಲಸ ಮಾಡುತ್ತಾ, ಸಿಕ್ಕಸಿಕ್ಕ ಹಾಗೆ ಬದುಕು ಸವೆಸುತ್ತಾ ಕಳೆಯುತ್ತಾರೆ. ಚಳಿಯಾದರೇನು,…

52 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಡಿಸೆಂಬರ್‌ 14 ಭಾನುವಾರ

1 hour ago