ಬೆಂಗಳೂರು: ಫೋನ್ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಬಿಜೆಪಿ ಪ್ರಮುಖರೊಂದಿಗೆ ಸಭೆಯಲ್ಲಿ ಪಾಲ್ಗೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಫೋನ್ ಟ್ಯಾಪಿಂಗ್ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು.
ಫೋನ್ ಟ್ಯಾಪ್ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ, ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್ ಟ್ಯಾಪ್ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದರು.
ಫೋನ್ ಟ್ಯಾಪ್ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಮಾಡಿ ಪೊಲೀಸ್ ಅಧಿಕಾರಿಗಳು ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಒತ್ತಾಯಿಸಿದರು.
ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಚರ್ಚಿಸಲಾಗಿದೆ. ಮತದಾರರನ್ನು ಹುಡುಕಿ ಅವರ ಮನ ಒಲಿಸುವ ಕೆಲಸ ಮಾಡಬೇಕೆಂದು ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಸಿ, ಪ್ರತಿ ಬೂತ್‌ಗಳಲ್ಲಿ ಕೆಲಸ ಮಾಡಲು ಸೂಚಿಸಲಾಗಿದೆ. ಟಿಕೆಟ್ ಕುರಿತು ಕೇಂದ್ರದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು.
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…