ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್ ಪೇ ಕಂಪನಿ ಸಿಇಒ ಸಮೀರ್ ನಿಗಮ್ ಕೂಡ ಆಕ್ಷೇಪಿಸಿ ಟ್ವಿಟ್ ಮಾಡಿ ತೀವ್ರ ಅಸಮಾಧಾನ ಹೊರಹಾಕಿ, ಕನ್ನಡಿಗರ ಬಗ್ಗೆ ಕುಹುಕವಾಡಿದ್ದರು.
ಹೀಗಾಗಿ ಸಮೀರ್ ನಡೆಗೆ ಕನ್ನಡಿಗರು ವ್ಯಾಪಕವಾಗಿ ವಿರೋಧಿಸಿ ಫೋನ್ ಪೇ ಬಾಯ್ಕಟ್ ಬಿಸಿ ಮುಟ್ಟಿಸಿ, ತಕ್ಷಣ ಕ್ಷಮೆಕೋರುವಂತೆ ಒತ್ತಾಯಿಸಿದ್ದರು. ಅದರಂತೆಯೇ ಇದೀಗ ಕಡೆಗೂ ಕನ್ನಡಿಗರ ಮುಂದೆ ಸಮೀರ್ ತಲೆಬಾಗಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಫೋನ್ ಪೇ ಸಿಇಒ ಸಮೀರ್ ನಿಗಮ್, ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ, ಯಾರದ್ದಾದರೂ ಭಾವನೆಗಳಿಗೆ ಧಕ್ಕೆಯಾಗಿದ್ದಾರೆ ಅದಕ್ಕೆ ದಯವಿಟ್ಟು ಕ್ಷಮಿಸಿ, ನಾನು ನಿಜವಾಗಿಯೂ ನಿಮಗೆ ಬೇಷರತ್ ಕ್ಷಮೆಯನ್ನು ನೀಡಲು ಬಯಸುತ್ತೇನೆ, ಕರ್ನಾಟಕ, ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…