ರಾಜ್ಯ

ಸುದ್ದಿ ಛಾಯಾಚಿತ್ರಗಾರರಿಗೆ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ.

ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ., 25,000/- ರೂ. ಹಾಗೂ 15,000/- ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್‌ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು.

ಸ್ಪರ್ಧೆಯ ಷರತ್ತುಗಳು:
• ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ :01-01-.202 4 ರಿಂದ 31-01-2025 ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.

• ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ.

• ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ Accreditation Card ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.

• ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‌ಗಳು ಇರಬಾರದು.

• ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್ ಗಳನ್ನುJPEG format ನಲ್ಲಿಮಾತ್ರ ಸಲ್ಲಿಸಬೇಕು.

• ಪ್ರದರ್ಶನಕ್ಕೆಆಯ್ಕೆಯಾಗುವ ಛಾಯಾಚಿತ್ರಗಳನ್ನು20”x 30” ಅಳತೆಯಲ್ಲಿಮುದ್ರಣ ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್ ಗಳು 20”x 30” ಅಳತೆಯ ,300 DPI ನಲ್ಲಿದ್ದು ಕನಿಷ್ಠ 5MB ಗಾತ್ರದಲ್ಲಿರಬೇಕು.

• ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನುಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.

• ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗವನ್ನುತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.

• ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು mediaacademy.karnataka.gov.in ವೆಬ್ಸೈಟ್ನಲ್ಲಿಇರುವ ನಿಗದಿತ ಅರ್ಜಿಯನ್ನುDown load ಮಾಡಿಕೊಂಡು ಭರ್ತಿಮಾಡಿ, ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್ಗಳನ್ನು photo.karnatakamediaacademy@gmail.com ಇ-ಮೇಲ್ ವಿಳಾಸಕ್ಕೆ ದಿನಾಂಕ: 15-02-2025 ರಂದು ಸಂಜೆ 5:00ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.

• ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನುಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆಆಯ್ಕೆಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದುಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.

• ಪ್ರಶಸ್ತಿಗೆ ಆಯ್ಕೆಯಾದ ಮೂರು ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ: ರೂ.35,000/ ದ್ವಿತೀಯ ಬಹುಮಾನ: ರೂ. 25000, ಹಾಗೂ ತೃತೀಯ ಬಹುಮಾನ: ರೂ.15000ಗಳನ್ನುನೀಡಲಾಗುವುದು.

• ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ 9448227768 ಹಾಗೂ 9449245980 ನ್ನು ಸಂಪರ್ಕಿಸಬಹುದಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago