ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹಂದಿ ಪದ ಬಳಸಿ ಅವಹೇಳ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್ ಕಂಡಕ್ಟ್ ರೂಲ್ ಬಗ್ಗೆ ಜ್ಞಾನವಿದ್ದರೆ ತಕ್ಷಣವೇ ಕ್ಷಮೆ ಕೇಳಲಿ ಎಂದು ಸೂಚನೆ ನೀಡಿದರು.
ಕೇಂದ್ರ ಸಚಿವರ ಬಗ್ಗೆ ಹೀಗೆ ಅಸಭ್ಯ ಭಾಷೆಯಲ್ಲಿ ಕೆಟ್ಟ ಪದ ಬಳಸುವುದನ್ನು ಯಾರೂ ಕೂಡ ಸಹಿಸಲ್ಲ ಎಂದು ಕಿಡಿಕಾರಿದರು.
ಕುಮಾರಸ್ವಾಮಿ ಅವರು ಇದುವರೆಗೂ ಯಾರ ಬಗ್ಗೆಯೂ ಅಸಭ್ಯ ಭಾಷೆ ಬಳಸಿಲ್ಲ. ಈ ಅಧಿಕಾರಿ ಬಗ್ಗೆಯೂ ಏಕವಚನದಲ್ಲಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.