ರಾಜ್ಯ

ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟದ ತೊಂದರೆ ಸೇರಿದಂತೆ ಶ್ವಾಸಕೋಶಕ್ಕೆ ಸಂಬಂಧಿಸಿದ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ.

ಇದನ್ನು ಓದಿ: ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಹಾಗಾಗಿ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನೂ ವಿಧಿಸಲಾಗುವುದು. ಹಾಗಾಗಿ ಈ ಕುರಿತು ನಿರ್ಲಕ್ಷ್ಯ ಬೇಡ, ನಿಯಮ ಪಾಲಿಸಿ ಶಿಕ್ಷೆಯಿಂದ ಪಾರಾಗಿ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

43 mins ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

4 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

4 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

4 hours ago