Mysore
19
few clouds

Social Media

ಬುಧವಾರ, 18 ಮಾರ್ಚ್ 2026
Light
Dark

ಮಾಜಿ ಸಂಸದ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಪಿಐಎಲ್‌ ವಜಾ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿದ್ದರು.

ಇದನ್ನು ಓದಿ: ಮೈಸೂರು ದಸರಾದಲ್ಲಿ ಎಲ್ಲರೂ ಭಾಗವಹಿಸಿ: ಸಚಿವ ಎಚ್.ಸಿ.ಮಹದೇವಪ್ಪ

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಸಿಜೆ ವಿಧೂ ಬರ್ಖು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಪ್ರತಾಪ್‌ ಸಿಂಹ ಅರ್ಜಿಯನ್ನು ವಜಾಗೊಳಿಸಿದೆ. ದಸರಾ ಉದ್ಘಾಟಕರ ಆಯ್ಕೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಾಪ್‌ ಸಿಂಹ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಜೊತೆಗೆ ಮತ್ತೆರಡು ಅರ್ಜಿಗಳನ್ನು ಸಹ ಹೈಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಅರ್ಜಿ ಸಲ್ಲಿಸಿದ್ದ ಬಿಜೆಪಿ ನಾಯಕ ಪ್ರತಾಪ್‌ ಸಿಂಹ ಹಾಗೂ ಇತರರಿಗೆ ತೀವ್ರ ಹಿನ್ನಡೆಯಾಗಿದೆ.

Tags:
error: Content is protected !!