ರಾಜ್ಯ

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಯಲಹಂಕ ಕೋಗಿಲು ಲೇಔಟ್‌ ಬಳಿ ಸರ್ಕಾರದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನೆಲಸಮ ಮಾಡಿದ್ದರು.

ಇದನ್ನು ಓದಿ: ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಈ ವಿಚಾರದ ಬಗ್ಗೆ ಟ್ವೀಟ್‌ ಮಾಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರು, ಬೆಂಗಳೂರಿನ ಫಕೀರ್‌ ಕಾಲೋನಿ ಹಾಗೂ ನಸೀಮ್‌ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳ ಮನೆಗಳನ್ನು ಧ್ವಂಸ ಮಾಡಿದ್ದು ಅತ್ಯಂತ ಆಘಾತಕಾರಿ ಮತ್ತು ನೋವಿನ ಸಂಗತಿ. ಉತ್ತರ ಭಾರತದಲ್ಲಿ ಸಂಘ ಪರಿವಾರ ಅನುಸರಿಸುತ್ತಿರುವ ಅಲ್ಪಸಂಖ್ಯಾತ ವಿರೋಧಿ ಆಕ್ರಮಣಕಾರಿ ರಾಜಕೀಯದ ಮತ್ತೊಂದು ಆವೃತ್ತಿಯನ್ನು ಕರ್ನಾಟಕದಲ್ಲಿಯೂ ಕಾಣಬಹುದು ಎಂದು ಸಿಟ್ಟು ಹೊರಹಾಕಿದ್ದಾರೆ.

ಕೊರೆಯುವ ಚಳಿ ಇರುವಾಗಲೇ ಇವರನ್ನು ಹೊರದಬ್ಬಲಾಗಿದೆ. ಉತ್ತರ ಭಾರತದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ರಾಜಕೀಯ ದಾಳಿ ಈಗ ದಕ್ಷಿಣಕ್ಕೂ ಬಂದಿದೆ. ಈ ಕ್ರಮವನ್ನು ಕಾಂಗ್ರೆಸ್‌ ಸರ್ಕಾರ ಯಾವ ರೀತಿ ಸಮರ್ಥಿಸಿಕೊಳ್ಳುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

3 mins ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

16 mins ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

26 mins ago

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

44 mins ago

ದುರಂದರ್ ದರ್ಬಾರ್….. ಮರಳಿ ಟ್ರ್ಯಾಕ್ ಗೆ ಬಂತು ಬಾಲಿವುಡ್.?

ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…

1 hour ago

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…

1 hour ago