ರಾಜ್ಯ

ಬಸ್ ಟಿಕೆಟ್ ದರ ಹೆಚ್ಚಿಸಲು ಸರ್ಕಾರ ಚಿಂತನೆ ; ರಾಜು ಕಾಗೆ ಸುಳಿವು

ಬೆಳಗಾವಿ : ಶಕ್ತಿ ಯೋಜನೆಯಿಂದ ನಷ್ಟದಲ್ಲಿದ್ದೇವೆ ಈಗಾಗಿ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಡಿಸೇಲ್‌ ಹಾಗೂ ಬಸ್‌ ಸ್ಪೇರ್‌ ಪಾರ್ಟ್ಸ್‌ ಗಳ ದರ ಕೂಡ ಹೆಚ್ಚಾಗಿದೆ. ಕಳೆದ ೧೦ ವರ್ಷಗಳಿಂದ ಟಿಕೆಟ್‌ ದರ ಏರಿಕೆ ಮಾಡಿಲ್ಲ. ಶಕ್ತಿಯೋಜನೆಯಿಂದ ನಾವು ಸದ್ಯಕ್ಕೆ ನಷ್ಟ ಅನುಭವಿಸುತ್ತಿದ್ದೇವೆ. ನಷ್ಟದಲ್ಲಿದ್ದರೂ ಕೂಡ ನಾವು ನಡೆಸಿಕೊಂಡು ಹೋಗುತ್ತಿದ್ದೇವೆ. ಈಗಾಗಿ ಟಿಕೆಟ್‌ ದರ ಏರಿಕೆ ಮಾಡಲು ಚಿಂತಿಸಿದ್ದೇವೆ ಎಂದು ತಿಳಿಸಿದರು.

ಅಲ್ಲದೆ ನಿಗಮದ ಆಸ್ತಿಗಳನ್ನ ಪರಭಾರೆ ಮಾಡ್ತೀವಿ. ಸಂಸ್ಥೆಗೆ ಸೇರಿದ ಹಳೆ ಬಿಲ್ಡಿಂಗ್‌ ನವೀಕರಿಸಿ ಬಾಡಿಗೆ ಕೊಡುತ್ತೇವೆ ಎಂದು ಮಾಹಿತಿ ನೀಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

30 mins ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

1 hour ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

3 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

6 hours ago