ಬೆಂಗಳೂರು: ರಾಜ್ಯದಾದ್ಯಂತ ಇನ್ನು ಮುಂದೆ ಹೋಟೆಲ್ ರೆಸ್ಟೋರೆಂಟ್, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ವಿವಿಧೆಡೆಗಳಿಂದ ಸಂಗ್ರಹಿಸಲಾಗಿದ್ದ ಇಡ್ಲಿ ಮಾದರಿಗಳು ಪ್ರಯೋಗಾಲಯ ಪರೀಕ್ಷೆಯಲ್ಲಿ ಅಸುರಕ್ಷಿತ ಎಂಬುದು ದೃಢಪಟ್ಟ ಬೆನ್ನಲ್ಲೇ ಸಚಿವ ದಿನೇಶ್ ಗುಂಡೂರಾವ್ ಈ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದರು
ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಇನ್ನು ಮುಂದೆ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು ಎಂದು ಗುಂಡೂರಾವ್ ಹೇಳಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…