ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಹೋರಾಟ ಮಾಡುವುದು ತಪ್ಪಲ್ಲ. ಆದರೆ ವಾಸ್ತವಾಂಶ ಗೊತ್ತಿರಲಿ. ರಾಜ್ಯದ ಹಿತ ರಕ್ಷಣೆಗೆ ನಾವಿದ್ದೇವೆ. ನೀವೆಲ್ಲ ಸೇರಿ ನಮಗೆ ಅಧಿಕಾರ ಕೊಟ್ಟಿದ್ದೀರಿ. ನಿಮ್ಮ ವಿರುದ್ಧ ಯಾವುದೇ ಕಾರಣಕ್ಕೂ ಕೆಲಸ ಮಾಡಲ್ಲ. ದಯವಿಟ್ಟು ಬಂದ್ ವಿಚಾರ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.




