ಬೆಂಗಳೂರು: ದಯವಿಟ್ಟು ನನಗೆ ವಿಷ ಕೊಡಿ ಎಂದು ನಟ ದರ್ಶನ್ ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಜೈಲಿನಲ್ಲಿ ನಿತ್ಯ ನರಕ ದರ್ಶನ ಆಗುತ್ತಿದೆ. ಒಂದು ಮನವಿ ಇದೆ. ಬಿಸಿಲು ನೋಡಿ ಒಂದು ತಿಂಗಳಾಯಿತು. ದಯವಿಟ್ಟು ನನಗೆ ಸ್ವಲ್ಪ ವಿಷ ಕೊಡಿ ಎಂದು ಕೋರ್ಟ್‌ಗೆ ನಟ ದರ್ಶನ್ ಮನವಿ ಮಾಡಿದ್ದಾರೆ.
ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ನಟ ದರ್ಶನ್ ದಿಂಬು, ಹಾಸಿಗೆ ನೀಡುವಂತೆ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಈ ವಿಚಾರಣೆ ನಡೆಯುವ ವೇಳೆ ನಟ ದರ್ಶನ್ ನ್ಯಾಯಾಧೀಶರಿಗೆ ನನಗೆ ದಯವಿಟ್ಟು ವಿಷ ನೀಡಿ ಎಂದು ಮನವಿ ಸಲ್ಲಿಸಿದರು. ಆಗ ಜಡ್ಜ್ ಹಾಗೆಲ್ಲಾ ಮಾತನಾಡಬಾರದು ಎಂದು ತಿಳಿ ಹೇಳಿದರು.
ಇಂದು ಮಧ್ಯಾಹ್ನ 3 ಗಂಟೆಗೆ ನಟ ದರ್ಶನ್ ಮನವಿಯ ಆದೇಶವನ್ನು ಕೋರ್ಟ್ ಪ್ರಕಟಿಸಲಿದ್ದು, ಮನೆ ಊಟ, ದಿಂಬು, ಹಾಸಿಗೆ ಕೋರಿ ನಟ ದರ್ಶನ್ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.
ಇನ್ನು ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಆದೇಶ ಕೂಡ ಇಂದು ಕೋರ್ಟ್ ಪ್ರಕಟಿಸಲಿದೆ.





