ರಾಜ್ಯ

ದಯವಿಟ್ಟ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ : ಇಬ್ರಾಹಿಂ !

ಬೆಂಗಳೂರು : ದಯಮಾಡಿ ಯಾರು ನಮ್ಮ ಸಮಾಜದ ಹೆಸರನ್ನು ಉಪಯೋಗ ಮಾಡಿಕೊಳ್ಳಲೇ ಬೇಡಿ ಎಂದು ಹಿರಿಯ ರಾಜಕಾರಣಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷಗಳು ಅಲ್ಪಸಂಖ್ಯಾತ ಹಾಗೂ ಹಿಂದುಳಿದವರ್ಗಗಳ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ ಎಂದು ಹೇಳಿದ್ದಾರೆ.

ಅದರಲ್ಲೂ ದೇಶದ ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದವರು ನಮ್ಮಸಮುದಾಯದ ಹೆಸರು ಬಳಿಸಿಕೊಳ್ಳಬೇಡಿ ಎಂದರು.

ಓಲೈಕೆ ಬಗ್ಗೆ ಮಾತನಾಡುತ್ತಾರೆ, ಸಾಚಾರ್‌ ಕಮಿಷನ್‌ ಬಂದು ೭೨ ವರ್ಷವಾಗಿದೆ. ಅವರ ವರದಿ ಪ್ರಕಾರ ದಲಿತರಿಗಿಂತ ಅಲ್ಪಸಂಖ್ಯಾತರು ಕೆಟ್ಟ ಪರಿಸ್ಥಿತಿಯಲ್ಲಿದ್ದಾರೆ ಎಂದು ಹೇಳಿದೆ. ಆದರೂ ನಾವು ಯಾವುದೇ ಚಳುವಳಿ ಮಾಡಿಲ್ಲ ಎಂದರು.

ದೇಶದಲ್ಲಿ ಶಾಂತಿ ಸೌಹಾಧತೆ ಇರಬೇಕು ಎಂಬ ಕಾರಣಕ್ಕೆ ದೇಶದಲ್ಲಿ ಎಂತೆಂತಾ ಕಾನೂನುಗಳು ಬಂದರೂ ತಲೆ ಬಾಗಿ ಹೋಗುತ್ತಿದ್ದೇವೆ ಎಂದರು.

ಇದನ್ನು ಅರ್ಥ ಮಾಡಿಕೊಂಡು ಪ್ರಧಾನಿ ಮೋದಿ ಅವರು ಈಗಲಾದರು ಒಂದು ಸ್ಪಷ್ಠನೆ ನೀಡುತ್ತಾರೆ ಎಂಬ ವಿಶ್ವಾಸ ನನ್ನಲಿದೆ ಎಂದು ಅಭಿಪ್ರಾಯಪಟ್ಟರು.

ಮೋದಿಗೆ ಹತಾಷೆ ಇದೆ : ಈ ಬಾರಿ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಮೋದಿ ಅವರೆ ಅಧಿಕಾರಕ್ಕೆ ಬರುತ್ತಾರೆ. ಆದರೆ ಅವರು ಊಹಿಸಿದಷ್ಟು ಬಹುಮತ ಬರುವುದಿಲ್ಲ ಎಂಬ ಹತಾಷೆ ಮೋದಿ ಅವರಿಗಿದೆ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

2 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

2 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

2 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

2 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

2 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

2 hours ago