ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕ್ಯಾಂಪಸ್ ಅನ್ನು ಉದ್ಘಾಟಿಸಿದರು.
1,600 ಕೋಟಿ ರೂ.ಗಳ ಹೂಡಿಕೆಯೊಂದಿಗೆ ನಿರ್ಮಿಸಲಾದ 43 ಎಕರೆ ಕ್ಯಾಂಪಸ್ ಯುಎಸ್‌ಎ ಹೊರಗೆ ಬೋಯಿಂಗ್ನ ಅತಿದೊಡ್ಡ ಹೂಡಿಕೆಯಾಗಿದೆ.
ವೈಮಾನಿಕ ಕ್ಷೇತ್ರಕ್ಕೆ ಸಂಬಂಧಿಸಿದ ಬೋಯಿಂಗ್ ಕೇಂದ್ರ ಮತ್ತು ಇದರ ಜೊತೆಗೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಪ್ರಧಾನಿ ಉದ್ಘಾಟನೆ ಮಾಡಿದ್ದಾರೆ.
ಕಾರ್ಯಕ್ರಮಕ್ಕೆ ಕೇವಲ ಸೀಮಿತ ವ್ಯಕ್ತಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಪ್ರಧಾನಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಚೆನ್ನೈಗೆ ಪ್ರಯಾಣಿಸಲಿದ್ಧಾರೆ. ಇದೇ ವೇಳೇ ಸಿಎಂ ಸಿದ್ದರಾಮಯ್ಯ, ಆರ್.ಆಶೋಕ್, ರಾಜ್ಯಪಾಲರು ಹಾಜರಿದ್ದರು.





