ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಾಳೆ ನಡೆಯುವ ಲಕ್ಷ ಕಂಠ ಗೀತೆ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮೋದಿ ಅವರ ಆಗಮನಕ್ಕಾಗಿ ಆದಿ ಉಡುಪಿ ಮೈದಾನದಲ್ಲಿ ಹೆಚ್ಚುವರಿ ಹೆಲಿಪ್ಯಾಡ್‌ಗಳನ್ನು ನಿರ್ಮಾಣ ಮಾಡಲಾಗಿದೆ. ನಿನ್ನೆ ದೆಹಲಿಯಿಂದ ಆಗಮಿಸಿದ ವಾಯುಸೇನೆ ಅಧಿಕಾರಿಗಳು ಗುಣಮಟ್ಟ ಪರೀಕ್ಷೆ ಮಾಡಿದ್ದಾರೆ.
ಇದನ್ನು ಓದಿ: ಸಂವಿಧಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ: ಪ್ರಧಾನಿ ನರೇಂದ್ರ ಮೋದಿ
ನಂತರ ವಾಯು ಸೇನೆಯ ಮೂರು ಹೆಲಿಕಾಪ್ಟರ್‌ಗಳು ಬಂದು ಉಡುಪಿ ಆಕಾಶದಲ್ಲಿ ಅನೇಕ ಬಾರಿ ಸುತ್ತು ಹೊಡೆದು ಹೆಲಿಪ್ಯಾಡ್ ಇಳಿಯುವ ಮತ್ತು ಟೇಕಾಫ್ ಮಾಡುವ ರಿಹರ್ಸೆಲ್ ನಡೆಸಿವೆ. ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲದಿರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಂಡಿದ್ದಾರೆ.
ನಾಳೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಭಕ್ತರಿಗೆ ಉಡುಪಿ ಕೃಷ್ಣಮಠ ಹಾಗೂ ರಥಬೀದಿಗೆ ಪ್ರವೇಶ ನಿರ್ಬಂಧಿಸಲಾಗಿದೆ.





