ರಾಜ್ಯ

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ: ಬಿಗಿ ಭದ್ರತೆ

ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಾಳೆ ನಡೆಯುವ ಲಕ್ಷ ಕಂಠ ಗೀತೆ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಮೋದಿ ಅವರ ಆಗಮನಕ್ಕಾಗಿ ಆದಿ ಉಡುಪಿ ಮೈದಾನದಲ್ಲಿ ಹೆಚ್ಚುವರಿ ಹೆಲಿಪ್ಯಾಡ್‌ಗಳನ್ನು ನಿರ್ಮಾಣ ಮಾಡಲಾಗಿದೆ. ನಿನ್ನೆ ದೆಹಲಿಯಿಂದ ಆಗಮಿಸಿದ ವಾಯುಸೇನೆ ಅಧಿಕಾರಿಗಳು ಗುಣಮಟ್ಟ ಪರೀಕ್ಷೆ ಮಾಡಿದ್ದಾರೆ.

ಇದನ್ನು ಓದಿ: ಸಂವಿಧಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

ನಂತರ ವಾಯು ಸೇನೆಯ ಮೂರು ಹೆಲಿಕಾಪ್ಟರ್‌ಗಳು ಬಂದು ಉಡುಪಿ ಆಕಾಶದಲ್ಲಿ ಅನೇಕ ಬಾರಿ ಸುತ್ತು ಹೊಡೆದು ಹೆಲಿಪ್ಯಾಡ್‌ ಇಳಿಯುವ ಮತ್ತು ಟೇಕಾಫ್‌ ಮಾಡುವ ರಿಹರ್ಸೆಲ್‌ ನಡೆಸಿವೆ. ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲದಿರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಂಡಿದ್ದಾರೆ.

ನಾಳೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಭಕ್ತರಿಗೆ ಉಡುಪಿ ಕೃಷ್ಣಮಠ ಹಾಗೂ ರಥಬೀದಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

7 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

7 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

9 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

9 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

10 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

10 hours ago