Mysore
27
broken clouds

Social Media

ಬುಧವಾರ, 28 ಜನವರಿ 2026
Light
Dark

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ

ಬೆಂಗಳೂರು: ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಲಿದ್ದಾರೆ.

ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು, ರಸ್ತೆ ಮಾರ್ಗವಾಗಿ 11.15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯನ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು-ಬೆಳಗಾವಿ ಮಾರ್ಗ ಸೇರಿ ಹೊಸ ಮೂರು ವಂದೇ ಭಾರತ್‌ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ಬಳಿಕ 11.45ಕ್ಕೆ ಆರ್.ವಿ.ರಸ್ತೆಯ ರಾಗೀಗುಡ್ಡ ಮೆಟ್ರೋ ನಿಲ್ದಾಣದಲ್ಲಿ ನೂತನ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣಕ್ಕೆ ಆಗಮಿಸಿ ಸುಮಾರು ಒಂದು ಗಂಟೆ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌, ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವರಾಜ ಮನೋಹರ್‌ ಲಾಲ್‌ ಖಟ್ಟರ್‌, ಅಶ್ವಿನಿ ವೈಷ್ಣವ್‌, ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ. ಶೋಭಾ ಕರಂದ್ಲಾಜೆ, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ವೇದಿಕೆಯಲ್ಲಿ ಅವಕಾಶ ನೀಡಲಾಗಿದೆ.

Tags:
error: Content is protected !!