ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು.
ಇಂದು ಬೆಳಿಗ್ಗೆ 10.25ರ ಸುಮಾರಿಗೆ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಸಿಎಂ ಪಿಣರಾಯಿ ವಿಜಯನ್ ಹಾಗೂ ಇತರೆ ಹಿರಿಯ ಗಣ್ಯರು ಬರಮಾಡಿಕೊಂಡರು.
ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ನಾಗರಕೋಯಿಲ್-ಮಂಗಳೂರು, ತಿರುವನಂತಪುರಂ-ತಾಂಬರಂ, ತಿರುವನಂತಪುರಂ-ಚರ್ಲಪಲ್ಲಿ ಎಂಬ ಮೂರು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ತ್ರಿಶೂರ್ ಮತ್ತು ಗುರುವಾಯೂರ್ ನಡುವೆ ಹೊಸ ಪ್ಯಾಸೆಂಜರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.





