ಮಂಡ್ಯ: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕಫೆಯ ಮೇಲೆ ನಡೆದ ಬಾಂಬ್ ದಾಳಿ ಅತ್ಯಂತ ಭಯಾನಕ ವಿಚಾರ, ಇದನ್ನು ಯಾರು ಸಮರ್ಥಿಸಿಕೊಳ್ಳುವ ಕೆಲಸ ಮಾಡಬಾರದು ಮತ್ತು ಅವರ ಪರವಾಗಿ ಹೇಳಿಕೆ ನೀಡುವುದು ಅಪರಾಧವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಕ್ಕರ್ ಬ್ಲಾಸ್ಟ್ ಗೂ ಇದಕ್ಕೂ ಸಾಮ್ಯತೆಯಿದೆ ಎಂದು ಹೇಳುತ್ತಾರೆ. ಅದೇನೆ ಇರಲಿ, ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.
ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪಾಕ್ ಪರ ಘೋಷಣೆ ಕೂಗಿರುವುದು ಎಫ್‌ಎಲ್‌ಎಸ್ ವರದಿಯಿಂದ ಸತ್ಯಾಂಶ ಹೊರ ಬಂದಿದ್ದರು, ತಪ್ಪು ಮಾಡಿದವರನ್ನು ಖಂಡಿಸದೇ ರಕ್ಷಣೆ ಮಾಡುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಬಿಜೆಪಿಯಿಂದ ಲೋಕ ಟಿಕೆಟ್ ಸಿಗಲಿದೆ: ಮಂಡ್ಯ ಕಣದಿಂದ ಶೇ 100 ರಷ್ಟು ನನಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ. ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವೇಳೆ ನನ್ನ ಹೆಸರು ಇರಲಿದೆ. ಟಿಕೆಟ್‌ಗಾಗಿ ದೆಹಲಿಗೆ ಹೋಗುವ ಅವಶ್ಯಕತೆಯಿಲ್ಲ. ಹೈ ಕರೆದರೆ ಮಾತ್ರ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದೆ, ಬೇಕದಾದವರು ಜೊತೆಯಲ್ಲಿದ್ದರು. ಯಾವುದೇ ಅನುಭವ ಇಲ್ಲದೇ ಮೊದಲ ಚುನಾವಣೆ ಗೆದ್ದಿದ್ದೆ. ಈಗ ಚಿಹ್ನೆಯಿಂದ ನಿಲ್ಲುತ್ತಿದ್ದೇನೆ. ಈ ಬಾರಿಯ ಚುನಾವಣೆ ಬೇರೆ ರೀತಿ ಇರಲಿದೆ ಎಂದರು.
ಇನ್ನು ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್ ಹಾಗೂ ಯಶ್ ಕ್ಯಾಂಪೆನ್ ಮಾಡಲಿದ್ದಾರಾ ಎಂಬ ಪ್ರಶ್ನೆಗೆ, ಕಳೆದ ಚುನಾವಣೆಯಲ್ಲಿ ಅವರು ಕೇವಲ ಬೆಂಬಲ ನೀಡಿಲ್ಲ ಬದಲಾಗಿ ತ್ಯಾಗ ಮಾಡಿದ್ದರು. ಸದ್ಯ ಇಬ್ಬರು ಬೇರೆ ಬೇರೆ ಚಿತ್ರಗಳನ್ನು ಮಾಡುತ್ತಿದ್ದು, ಚುನಾವಣಾ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೇನೆ. ಅದರೆ, ಎಲ್ಲವನ್ನು ಬಿಟ್ಟು ಕ್ಯಾಂಪೆನ್ ಮಾಡಿ ಎನ್ನುವುದು ಸರಿಯಲ್ಲ ಎಂದು ಉತ್ತರಿಸಿದರು.
ಯಶ್ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂಬ ಹೇಳಿಕೆಗೆ, ಅಂದು ನನ್ನ ಜೊತೆ ಮನೆಯ ಮಕ್ಕಳಂತೆ ಚುನಾವಣಾ ಕಣದಲ್ಲಿ ನಿಂತಿದ್ದಾರು. ಇಂದು ಅವರು ಬಂದರೆ ಸ್ವಾಗತಾರ್ಹ, ಪ್ರಚಾರಕ್ಕೆ ಬರಲಿಲ್ಲ ಎಂದರೂ ಸಹಾ ಯಾವುದೇ ಮನಸ್ಥಾಪ ಇರುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…